ಬೆಳಗಾವಿ: ನಾವು ಯತ್ನಾಳ್ ಬೆನ್ನಿಗೆ ನಿಲ್ಲುತ್ತೇವೆ, ಕೇಂದ್ರ ನಾಯಕರ ಮನವೊಲಿಸುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯತ್ನಾಳ್ ಅಥವಾ ನನ್ನನ್ನು ಅಧ್ಯಕ್ಷನನ್ನಾಗಿ ಮಾಡಬೇಡಿ. ಒಂದೇ ಸಮುದಾಯಕ್ಕೆ ಸೀಮಿತವಾದವರಿಗೆ ಅಧ್ಯಕ್ಷ ನಮಗೆ ಬೇಡ. ಎಲ್ಲರನ್ನೂ ಸಮಾನವಾಗಿ ಕಾಣಲು ಸಮರ್ಥರಿದ್ದವರಿಗೆ ಮಾತ್ರ ಅಧ್ಯಕ್ಷ ಸ್ಥಾನ ಕೊಡಿ ಎಂದರು.
Advertisement
ಇನ್ನೂ ಯತ್ನಾಳ್ಗೆ ಬಿಜೆಪಿ ಕೇಂದ್ರ ಸಮಿತಿಯಿಂದ ಶೋಕಾಸ್ ನೋಟಿಸ್ ವಿಚಾರದ ಕುರಿತು ಮಾತನಾಡಿ, “ಯತ್ನಾಳ್ಗೆ ಶೋಕಾಸ್ ನೋಟಿಸ್ ಇಂದು ಬಂದಿದ್ದಲ್ಲ. ಎರಡು ದಿನಗಳ ಹಿಂದೆಯೇ ಬಂದಿದೆ. ಆದರೆ, ಮಾಧ್ಯಮಗಳಲ್ಲಿ ಇಂದು ತೋರಿಸುತ್ತಿದ್ದಾರೆ. ನಾವು ಯತ್ನಾಳ್ ಬೆನ್ನಿಗೆ ನಿಲ್ಲುತ್ತೇವೆ. ಕೇಂದ್ರ ನಾಯಕರ ಮನವೊಲಿಸುತ್ತೇವೆ ಎಂದು ಹೇಳಿದರು.