ಕೆ.ವಿ. ಬಡಿಗೇರರಿಗೆ ರಾಷ್ಟ್ರೀಯ ಫೆಲೋಶಿಫ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಆರೋಗ್ಯ ಇಲಾಖೆಯಲ್ಲಿ ಸರ್ವೋತ್ತಮ ಸೇವೆ ಸಲ್ಲಿಸುತ್ತಿರುವ ಮುಂಡರಗಿ ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ ಕೆ.ವಿ. ಬಡಿಗೇರ ದೆಹಲಿಯಲ್ಲಿ ಭಾರತಿಯ ದಲಿತ ಸಾಹಿತ್ಯ ಅಕಾಡೆಮಿಯವರು ಕೊಡಮಾಡುವ ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟ್ರೀಯ ಫೇಲೊಶಿಪ್ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಡಿ.8ರಂದು ರಾಷ್ಟ್ರೀಯ ಅಧ್ಯಕ್ಷ ಡಾ. ಸಮನಾಕ್ಷ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Advertisement

ಪ್ರಶಸ್ತಿಗೆ ಆಯ್ಕೆಯಾದ ಕೆ.ವಿ. ಬಡಿಗೇರರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಎಸ್.ಎಸ್. ನೀಲಗುಂದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷರಾದ ಸಿದ್ದಪ್ಪ ಲಿಂಗದಾಳ, ಮಲ್ಲಿಕಾರ್ಜುನ ಕಲಕಂಬಿ, ಅಜಯಕುಮಾರ ಕಲಾಲ, ವಾಯ್.ಎನ್. ಕಡೇಮನಿ, ಮತ್ತಪ್ಪ ಹಟ್ಟಿಮನಿ, ಎಸ್.ಬಿ. ಗಡಾದ, ಎಸ್.ಬಿ. ಕವಳಿಕಾಯಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ ಎಂದು ಶಿದ್ದಪ್ಪ ಲಿಂಗದಾಳ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here