ನವದೆಹಲಿ: ಹೆಚ್ ಡಿ ದೇವೇಗೌಡರ ಕುಟುಂಬವನ್ನು ಮುಗಿಸುವುದು ಸಾಧ್ಯವಿಲ್ಲ ಎಂದು ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಹೆಚ್ ಡಿ ದೇವೇಗೌಡರ ಕುಟುಂಬವನ್ನು ಮುಗಿಸುವುದು ಸಾಧ್ಯವಿಲ್ಲ, ಲೋಕಸಭಾ ಚುನಾವಣೆಯಲ್ಲಿ ಏನು ನಡೆಯಿತು ಅಂತ ಎಲ್ಲರಿಗೂ ಗೊತ್ತಿದೆ ಎಂದರು.
Advertisement
ಇನ್ನೂ ನಾಳೆ ಹಾಸನದಲ್ಲಿ ಕಾಂಗ್ರೆಸ್ ಪಕ್ಷದ ಅದ್ದೂರಿ ಜನಕಲ್ಯಾಣ ಸಮಾವೇಶ ನಡೆಯಲಿದೆ. ಕಳೆದ 50 ವರ್ಷಗಳಲ್ಲಿ ಕಾಂಗ್ರೆಸ್ ಹಾಸನ ಜಿಲ್ಲೆಯನ್ನಂತೂ ಉದ್ಧಾರ ಮಾಡಲಿಲ್ಲ, ಇನ್ನಾದರೂ ಮಾಡಲಿ, 6 ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನಾನು ಇಂಥ ಹಲವಾರು ಸಮಾವೇಶಗಳನ್ನು ನೋಡಿದ್ದೇನೆ ಎಂದು ಹೇಳಿದರು.