ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು. ಹೀಗಾಗಿ ಇಂದು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆದಿದೆ ಇದಕ್ಕೆ ಸಂಬಂಧ ಪಟ್ಟಂತೆ ಹೈಕೋರ್ಟ್ ವಿಭಾಗೀಯ ಪೀಠವು ಜನವರಿ 25 ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಜಾರಿ ನಿರ್ದೇಶನಾಲಯ ತನಿಖಾ ವರದಿಯನ್ನು ಲೋಕಾಯುಕ್ತ ಪೊಲೀಸರ ಜತೆ ಹಂಚಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸಿಎಂ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಕೂಡ ಇಂದು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಮೇಲ್ಮನವಿಗಳ ವಿಚಾರಣೆಯನ್ನು ಜನವರಿ 25ಕ್ಕೆ ನಿಗದಿಪಡಿಸಿದ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ..
ಹೈಕೋರ್ಟ್‌ನಲ್ಲಿ ತಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ಜಾರಿ ನಿರ್ದೇಶನಾಲಯದವರು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದು ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದರು.