ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

0
Spread the love

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸಿನಿಮಾ ತಂಡಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಎಂದು ಸ್ವತಃ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೇ ದೂರು ನೀಡುವಂತೆ ಅರಣ್ಯ ಇಲಾಖೆಗೆ ಸೂಚಿಸಿದ್ದರು. ಈ ಬಗ್ಗೆ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದಂತೆ ಟಾಕ್ಸಿಕ್ ಸಿನಿಮಾದ ನಿರ್ಮಾಪಕರು ಕೋರ್ಟ್ ಮೊರೆ ಹೋಗಿದ್ದರು. ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಟಾಕ್ಸಿಕ್ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್‌ಐಆರ್ ದಾಖಲಿಸದಂತ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

Advertisement

‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣಕ್ಕಾಗಿ ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಎಂದು ಕೆವಿಎನ್ ಸಂಸ್ಥೆ ಮತ್ತು ಮಾನ್ ಸ್ಟರ್ ಕ್ರಿಯೆಷನ್ಸ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದರ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ನೀಡಿದ್ದಾರೆ.

ಬೆಂಗಳೂರಿನ ಹೊರವಲಯದಲ್ಲಿರುವ ಎಚ್​ಎಂಟಿಯ ಮೈದಾನದಲ್ಲಿ ‘ಟಾಕ್ಸಿಕ್’ ಸಿನಿಮಾ ಸೆಟ್​ ನಿರ್ಮಾಣ ಮಾಡಲಾಗಿತ್ತು. ಭಾರಿ ಮೊತ್ತದ ಹಣ ಖರ್ಚು ಮಾಡಿ ಬೃಹತ್ ಸೆಟ್ ಅನ್ನು ಇಲ್ಲಿ ನಿರ್ಮಾಣ ಮಾಡಲಾಗಿತ್ತು. ಆದರೆ ಈ ಸೆಟ್ ನಿರ್ಮಾಣ ಮಾಡಲು ಮೈದಾನದಲ್ಲಿದ್ದ ಮರಗಳನ್ನು ಅಕ್ರಮವಾಗಿ, ಯಾವುದೇ ಪೂರ್ವಾನುಮತಿ ಇಲ್ಲದೆ ಕಡಿಯಲಾಗಿದೆ ಎಂದು ಅರಣ್ಯ ಇಲಾಖೆ ಆರೋಪ ಮಾಡಿತ್ತು, ವಕೀಲರೊಬ್ಬರು ಸಹ ನ್ಯಾಯಾಲಯದಲ್ಲಿ ಈ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಹ ಸಲ್ಲಿಕೆ ಮಾಡಿದ್ದರು.

ಸ್ವತಃ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆಯವರು ‘ಟಾಕ್ಸಿಕ್’ ಸಿನಿಮಾ ಸೆಟ್​ಗೆ ಭೇಟಿ ನೀಡಿ ಅಲ್ಲಿ ಪರಿಶೀಲನೆ ನಡೆಸಿದರು. ಅರಣ್ಯ ಇಲಾಖೆ ವತಿಯಿಂದ ಸ್ಯಾಟಲೈಟ್ ಚಿತ್ರಗಳನ್ನು ಬಿಡುಗಡೆ ಮಾಡಿ, ‘ಟಾಕ್ಸಿಕ್’ ಸಿನಿಮಾ ಸೆಟ್ ಹಾಕುವ ಮುಂಚೆ ಆ ಪ್ರದೇಶ ಹೇಗಿತ್ತು, ಸೆಟ್ ನಿರ್ಮಾಣ ಮಾಡಿದ ಮೇಲೆ ಹೇಗಾಗಿದೆ ಎಂದು ಮಾಧ್ಯಮಗಳ ಮುಂದೆ ತೋರಿಸಿದ್ದರು. ಆದರೆ ಚಿತ್ರತಂಡ, ತಾವು ಮರಗಳನ್ನು ಕಡಿದಿಲ್ಲವೆಂದು, ಅಲ್ಲದೆ ಮೈದಾನದಲ್ಲಿದ್ದ ಗಿಡಗಂಟೆಗಳನ್ನಷ್ಟೆ ಸ್ವಚ್ಛ ಮಾಡಿರುವುದಾಗಿ ಹೇಳಿಕೊಂಡಿತ್ತು.

‘ಚಿತ್ರ ನಿರ್ಮಾಪಕ ಕೆವಿಎನ್ ಮಾನ್ ಸ್ಟರ್ ಮೈಂಡ್ ಕ್ರಿಯೇಷನ್ಸ್ ಅವರಿಂದ ಎಫ್‌ಐಆರ್‌ಗೆ ತಡೆ ನೀಡುವಂತೆ  ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪಿಸಿ ಕೇಸ್ ಹಾಕಲಾಗಿತ್ತು. ಟಾಕ್ಸಿಕ್ ಚಿತ್ರತಂಡ ಸೆಟ್ ಹಾಕಿದ ಜಾಗವನ್ನು 1963ರಲ್ಲೇ ರಾಜ್ಯ ಸರ್ಕಾರ ಹೆಚ್ ಎಂಟಿ ಸಂಸ್ಥೆಗೆ ನೀಡಿದೆ. ಆಗ ಒಟ್ಟು 400 ಎಕರೆ ಭೂಮಿಯನ್ನು ರಾಜ್ಯದಿಂದ ಹೆಚ್‌ಎಂಟಿ ಸಂಸ್ಥೆಗೆ ನೀಡಲಾಗಿತ್ತು. ಈ ಜಮೀನಿನ ಪೈಕಿ 18 ಎಕರೆಯನ್ನು ಕೆನರಾ ಬ್ಯಾಂಕ್ ಗೆ ಹೆಚ್ಎಂಟಿ ಸಂಸ್ಥೆಯು ಮಾರಾಟ ಮಾಡಿದೆ. ಕೆನರಾ ಬ್ಯಾಂಕ್‌ನಿಂದ ಲೀಸ್ ಪಡೆದು ಟಾಕ್ಸಿಕ್ ಸಿನಿಮಾ ತಂಡ ಇಲ್ಲಿ 30 ಕೋಟಿ ರೂ. ಹೂಡಿಕೆ ಮಾಡಿ ಸಿನಿಮಾ ಸೆಟ್ ಹಾಕಲಾಗಿದೆ ಎಂದು ಟಾಕ್ಸಿಕ್ ಸಿನಿಮಾ ನಿರ್ಮಾಪಕರ ಪರ ವಕೀಲರು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here