ಬಾಣಂತಿಯರ ಸರಣಿ ಸಾವು ಪ್ರಕರಣ: ನನ್ನ ತಪ್ಪಿದ್ರೆ ನಾನು ರಾಜೀನಾಮೆ ಕೊಡಲು ಸಿದ್ಧ – ಆರೋಗ್ಯ ಸಚಿವ

0
Spread the love

ಬೆಂಗಳೂರು: ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರಿದಿದೆ. ಇದರ ಬೆನ್ನಲ್ಲೇ  ನನ್ನ ತಪ್ಪಿದ್ರೆ ನಾನು ರಾಜೀನಾಮೆ ಕೊಡಲೂ ಸಿದ್ಧನಾಗಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನನ್ನ ತಪ್ಪಿದ್ರೆ ನಾನು ರಾಜೀನಾಮೆ ಕೊಡಲೂ ಸಿದ್ಧನಾಗಿದ್ದೇನೆ. ಇದರಲ್ಲಿ ನನ್ನ ಪ್ರತಿಷ್ಠೆ ಏನಿಲ್ಲ. ಇದು ಜೀವದ ವಿಚಾರ.

Advertisement

ನನ್ನ ರಾಜೀನಾಮೆಯಿಂದ ಸರಿಯಾಗುತ್ತೆ ಅಂದರೆ ರಾಜೀನಾಮೆಗೂ ಸಿದ್ಧ. ಆದರೆ ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಲೇಬೇಕು. ಕ್ರಮ ತೆಗೆದುಕೊಳ್ಳಲೇಬೇಕು. ಇಲ್ಲಿಯವರೆಗೆ ಈ ವರ್ಷ ರಾಜ್ಯದಲ್ಲಿ 327 ಮೆಟರ್ನಲ್ ಸಾವಾಗಿದೆ. ಎಲ್ಲವನ್ನೂ ಪರಿಶೀಲಿಸಿ ಅಂತ ಹೇಳಿದ್ದೇವೆ. ಇಂತಹ ಪ್ರಕರಣಗಳಲ್ಲಿ ಸಹನೆ ಇರಬಾರದು, ಕಠಿಣ ಕಾನೂನು ಕ್ರಮ ಆಗಬೇಕು ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here