ಚಾಮರಾಜನಗರ: ಅಪಘಾತದಲ್ಲಿ ಗಾಯಗೊಂಡಿದ್ದ ಗ್ರಾಮಪಂಚಾಯ್ತಿ ಸದಸ್ಯ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೊಡಗಾಪುರ ಗ್ರಾಮದಲ್ಲಿ ನಡೆದಿದೆ. ಸೋಮಹಳ್ಳಿ ಗ್ರಾಪಂ ಸದಸ್ಯರೂ ಆಗಿದ್ದ ಬಸವಣ್ಣಸ್ವಾಮಿ(45) ಮೃತಪಟ್ಟ ದುರ್ಧೈವಿಯಾಗಿದ್ದು,
Advertisement
ಬೇಗೂರು ಸಮೀಪ ಕಳೆದ ವಾರ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದರಿಂದ ಬಸವಣ್ಣ ಸ್ವಾಮಿ ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ತಡ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.