ಬೆಂಗಳೂರು: ಸುಳ್ಳು ಹೇಳುವುದರಲ್ಲಿ ಸಿಎಂ ಸಿದ್ದರಾಮಯ್ಯರವರಿಗೆ ನೊಬೆಲ್ ಸಿಗಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಬಾರ್ಡ್ನಿಂದ ರಾಜ್ಯಕ್ಕೆ ಹಣ ಕಮ್ಮಿ ಮಾಡಿಲ್ಲ. ಇಡೀ ದೇಶಕ್ಕೆ ಕಡಿಮೆಯಾಗಿದೆ. ಈ ವಿಚಾರದಲ್ಲಿ ಸಿಎಂ ಸುಳ್ಳು ಹೇಳಿದ್ದಾರೆ. ಬ್ಯಾಂಕ್ಗಳು ಕೃಷಿ ವಲಯಕ್ಕೆ ಉತ್ತಮವಾಗಿಯೇ ಸಾಲ ಕೊಡುತ್ತಿವೆ.
ರಾಷ್ಟ್ರೀಯ ಬ್ಯಾಂಕ್ಗಳು, ಸಹಕಾರ ಬ್ಯಾಂಕ್ಗಳು 4% ಬಡ್ಡಿ ದರದಲ್ಲೇ ಸಾಲ ಕೊಡುವುದು. ಆದರೆ ಸಿಎಂ 7% ನಲ್ಲಿ ಸಾಲ ಕೊಡುತ್ತಿವೆ ಅಂತ ಸುಳ್ಳು ಹೇಳಿದ್ದಾರೆ. ಪ್ರಶ್ನೆ ಕೇಳಿದರೆ ಪತ್ರಕರ್ತರಿಗೆ ಸಿಎಂ ಬೆದರಿಸುತ್ತಾರೆ. ಜನರನ್ನು ತಪ್ಪು ದಾರಿಗೆ ಎಳೆಯುತ್ತಾರೆ. ಇವರು ಸುಳ್ಳುಗಾರ ಸಿದ್ದರಾಮಯ್ಯ. ಸುಳ್ಳು ಹೇಳುವುದರಲ್ಲಿ ಇವರಿಗೆ ನೊಬೆಲ್ ಸಿಗಬೇಕು. ಇಂಥಾ ಸುಳ್ಳು ಹೇಳುವ ಸಿಎಂ ಅನ್ನು ರಾಜ್ಯ ಹಿಂದೆ ಕಂಡಿಲ್ಲ ಎಂದು ಕಿಡಿಕಾರಿದ್ದಾರೆ.



