ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕುಟುಂಬ ಸಮೇತ ಬೆಳ್ಳಂಬೆಳಗ್ಗೆ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ತೆರಳಿದ್ದಾರೆ. ಈ ವೇಳೆ ಶಿವಣ್ಣ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ತಿಮ್ಮಪ್ಪನಿಗೆ ಮುಡಿ ನೀಡಿದ್ದಾರೆ.
ಇತ್ತೀಚೆಗೆ ಶಿವಣ್ಣ ನಟನೆಯ ಭೈರತಿ ರಣಗಲ್ ಸಿನಿಮಾ ಬಿಡುಗಡೆಯಾಗಿ ಯಶಸ್ಸು ಕಂಡಿದೆ. ಮತ್ತೊಂದೆಡೆ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯದ ಸಮಸ್ಯೆ ಕಾಡುತ್ತಿದೆ. ಅದರ ಚಿಕಿತ್ಸೆಗಾಗಿ ಸದ್ಯದಲ್ಲೇ ಅಮೆರಿಕಾಗೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ತಿಮ್ಮಪ್ಪನ ದರ್ಶನ ಪಡೆದು ದೇವರಿಗೆ ಮುಡಿ ಕೊಟ್ಟಿದ್ದಾರೆ.
ಶಿವಣ್ಣ ಕುಟುಂಬದ ಜೊತೆ ನಿರ್ಮಾಪಕ ಕೆ.ಪಿ.ಶ್ರೀಕಾಂತ್, ಹಾಗೂ ಶಿವಣ್ಣ ಪುತ್ರಿ ನಿವೇದಿತಾ ಸಹ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.



