ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಪಟ್ಟಣದ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದಿರುವ ದತ್ತಯಾಗ ಹಾಗೂ ಹನುಮಾನ ಚಾಲೀಸಾ ಪಠಣ ಕಾರ್ಯಕ್ರಮದ ನಿಮಿತ್ತ ಶುಕ್ರವಾರ ಸಂಜೆ ಶ್ರೀ ಮಾರುತಿ, ಶ್ರೀ ಬ್ರಹ್ಮ ಚೈತನ್ಯ ಮಹಾರಾಜರ ದಿವ್ಯ ಪಾದುಕೆ, ಹೆಬ್ಬಳ್ಳಿಯ ಚೈತನ್ಯಾಶ್ರಮದ ಪ.ಪೂ ದತ್ತಾವಧೂತ ಮಹಾರಾಜರ ಭವ್ಯ ಶೋಭಾಯಾತ್ರೆ ನೂರಾರು ಸದ್ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.
ಅಖಿಲ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ನಿಗಮದ ಹಿಂದಿನ ಸದಸ್ಯ ಮದನ ಕುಲಕರ್ಣಿ, ವಿವೇಕ ಕುಲಕರ್ಣಿ, ಗದಗ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ವೆಂಕಟೇಶ ಕುಲಕರ್ಣಿ, ಸ್ವಾಗತ ಸಮಿತಿ ಗೌರವಾಧ್ಯಕ್ಷ ಡಾ, ಜಿ.ಕೆ. ಕಾಳೆ, ಅಧ್ಯಕ್ಷ ಶ್ರೀಪಾಧಭಟ್ಟ ಜೋಷಿ, ಶ್ರೀ ದತ್ತ ಭಕ್ತ ಮಂಡಳಿ ಅಧ್ಯಕ್ಷ ಡಾ. ನಾಗರಾಜ ಗ್ರಾಮಪುರೋಹಿತ, ಕಾರ್ಯದರ್ಶಿ ರಘುನಾಥ ಕೊಂಡಿ ಶೋಭಾಯಾತ್ರೆಗೆ ಚಾಲನೆ ನೀಡಿದರು.
ಶ್ರೀ ರಾಮ ಮಂದಿರದಿAದ ಪ್ರಾರಂಭವಾದ ಶೋಭಾಯಾತ್ರೆಯು ಬಸ್ ನಿಲ್ದಾಣ, ಜಕ್ಕಲಿ ಕ್ರಾಸ್, ಹಳೆ ಬಸ್ ನಿಲ್ದಾಣ, ಡಾ. ಕಾಳೆ ಆಸ್ಪತ್ರೆ ಮಾರ್ಗದಿಂದ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ತಲುಪಿತು. ದೇವಸ್ಥಾನದಲ್ಲಿ ದೂಳಿ ಪಾದಪೂಜೆ ಜರುಗಿತು. ಈ ಸಮಯದಲ್ಲಿ ನರೇಗಲ್ಲ ಹಾಗೂ ಸುತ್ತಮುತ್ತಲಿನ ಗ್ರಾಮದ ಸದ್ಭಕ್ತರು, ಹೆಬ್ಬಳ್ಳಿ ಚೈತನ್ಯಾಶ್ರಮದವರು ಪಾಲ್ಗೊಂಡಿದ್ದರು.



