ಮಂಗಳೂರು: ದೇಶದ ಸಂಸ್ಕ್ರತಿ, ಪರಂಪರೆ, ದುರ್ಬಲರ ರಕ್ಷಣೆಗೆ ನಾವೆಲ್ಲರೂ ಸಿದ್ಧರಿರಬೇಕು ಎಂದು ಆರ್ಎಸ್ಎಸ್ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತನಾಡಿದ ಅವರು, ಎರಡು ವರ್ಷಗಳಿಂದ ಈ ಬಗ್ಗೆ ಚರ್ಚೆ, ಚಿಂತನಾ, ಮಂಥನಾ ನಡೆದು ಎಲ್ಲರ ಸಮ್ಮತಿಯೊಂದಿಗೆ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ.
Advertisement
ಪಂಚ ಪೋಷಾತ್ಮಕ ವಿಚಾರವನ್ನು ದೃಷ್ಟಿಯಲ್ಲಿಟ್ಟು ಈ ಶಿಕ್ಷಣ ನೀತಿ ರೂಪಿಸಲಾಗಿದೆ. ಈ ಮಾದರಿಯ ಶಿಕ್ಷಣ ಈಗಾಗಲೇ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಶಿಕ್ಷಣವನ್ನು ಸರಿಯಾಗಿ ಉಪಯೋಗಿಸುವ ಬುದ್ದಿ ಸಹ ಅವಶ್ಯಕ. ಎಲ್ಲರನ್ನು ಪ್ರೀತಿಸುವಂತೆ ನಮ್ಮ ದೇಶದ ಪರಂಪರೆ, ಸಂಸ್ಕೃತಿ ಕಲಿಸುತ್ತದೆ. ನಮ್ಮ ಜ್ಞಾನ ಉತ್ಕೃಷ್ಟವಾಗಿರಬೇಕು. ದೇಶದ ಸಂಸ್ಕ್ರತಿ, ಪರಂಪರೆ, ದುರ್ಬಲರ ರಕ್ಷಣೆಗೆ ನಾವೆಲ್ಲರೂ ಸಿದ್ಧರಿರಬೇಕು ಎಂದಿದ್ದಾರೆ.