ಸಂಡೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಾದ ಬಾಣಂತಿಯರ ಸರಣಿ ಸಾವಿನಿಂದಾಗಿ ರಾಜ್ಯದಲ್ಲಿ ಎಲ್ಲಿಲ್ಲದ ಚರ್ಚೆ ಶುರುವಾಗಿದೆ. ಇದರ ಬೆನ್ನಲ್ಲೇ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ.
Advertisement
ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ 2 ಲಕ್ಷ ರೂ. ಪರಿಹಾರ ಘೋಷಣೆ ಆಗಿದೆ. ಜೊತೆಗೆ 3 ಲಕ್ಷ ರೂ. ಕೊಡುತ್ತೇವೆ ಎಂದು ಹೇಳಿದರು.
ಇನ್ನೂ ಬಳ್ಳಾರಿ ಬಿಮ್ಸ್ನಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ, ಇದು ದುರದೃಷ್ಟ. ಮೃತ ಬಾಣಂತಿಯರೆಲ್ಲರೂ ಬಡ ಕುಟುಂಬದವರು. ಹೀಗಾಗಿ, ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಹೇಳಿದ್ದಾರೆ.