2028ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ: ಸಿಎಂ ಸಿದ್ದರಾಮಯ್ಯ

0
Spread the love

ಸಂಡೂರು: 2028ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭಿನಂದನಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ವಕ್ಫ್ ಆಸ್ತಿ, ಮೂಡಾ ಬಗ್ಗೆ ಅನಗತ್ಯ ಅಪ್ರಚಾರ ಮಾಡಿದರು. ವಾಲ್ಮೀಕಿ ಹಗರಣದಲ್ಲಿ ಮಂತ್ರಿ, ಮುಖ್ಯಮಂತ್ರಿ ಪಾತ್ರ ಇದೆ ಎಂದು ದೂರಿದರು.

Advertisement

ಮಹಾರಾಷ್ಟ್ರ ಚುನಾವಣೆಯಲ್ಲಿ ಕರ್ನಾಟಕದ ಹಣ ಬಳಸಿದೆ ಎಂದು ಸುಳ್ಳು ಹೇಳಿದರು. 2028ರವರೆಗೂ ಅಧಿಕಾರದಲ್ಲಿ ಇರುತ್ತೇವೆ. ಯಾವುದೇ ಗ್ಯಾರಂಟಿಯನ್ನು ಅಲ್ಲಿಯವರೆಗೂ ನಿಲ್ಲಿಸಲ್ಲ. 2028ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಯೋಜನೆ ಮುಂದುವರೆಸುತ್ತೇವೆ. ಅಭಿವೃದ್ಧಿ ಕೆಲಸಕ್ಕೆ ದುಡ್ಡಿಲ್ಲ ಎನ್ನುವುದು ಸುಳ್ಳು ಎಂದು ಪ್ರತಿಪಕ್ಷಗಳಿಗೆ ಮಾತಿನಲ್ಲಿ ಚಾಟಿ ಬೀಸಿದರು

ಅನ್ನಪೂರ್ಣಗೆ ನಿಮ್ಮ ಆಶೀರ್ವಾದ ಇರಲಿ ಎಂದು ಮನವಿ ಮಾಡಿದ್ದೆ. ಇಂದು ಸಂವಿಧಾನ ಉಳಿವಿಗೆ, ಪ್ರಜಾಪ್ರಭುತ್ವ ಉಳಿಯಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ. ಬಿಜೆಪಿ ಬಡವರ ಪರವಾದ ಪಕ್ಷ ಅಲ್ಲ ಎಂದು ನಾನು ಮನವಿ ಮಾಡಿದ್ದೆ. ಧರ್ಮ, ಜಾತಿ ಇಲ್ಲದೆ 5 ಗ್ಯಾರಂಟಿ ಯೋಜನೆ ಜನರಿಗೆ ನೀಡಿದ್ದೇವೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here