ಅಧಿವೇಶನ ಅರ್ಥಪೂರ್ಣವಾಗಿ ನಡೆಯಬೇಕೆಂಬುದು ನಮ್ಮ ಉದ್ದೇಶ: ಬಸವರಾಜ ಹೊರಟ್ಟಿ

0
Spread the love

ಹುಬ್ಬಳ್ಳಿ: ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿ ನಡೆಯಬೇಕೆಂಬುದು ನಮ್ಮ ಉದ್ದೇಶ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನ ಅರ್ಥಪೂರ್ಣವಾಗಿ ನಡೆಯಬೇಕೆಂಬುದು ನಮ್ಮ ಉದ್ದೇಶ.

Advertisement

ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚಿಸಲು 20 ಕೋಟಿ ರೂ. ಖರ್ಚು ಮಾಡಿ ಸದನ ನಡೆಸಲಾಗುತ್ತಿದೆ. ಹೀಗಾಗಿ ಎರಡೂ ವಾರಗಳಲ್ಲಿ 4 ದಿನ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚಿಸಲು ಮೀಸಲು. ಮಂಗಳವಾರ, ಬುಧವಾರ ಸುದೀರ್ಘವಾಗಿ ಚರ್ಚಿಸಲು ಅವಕಾಶ ಮಾಡಿಕೊಡುತ್ತೇವೆ ಎಂದು ಹೇಳಿದರು.

ಇನ್ನು ಮಹದಾಯಿ, ತುಂಗಭದ್ರಾ, ಕೃಷ್ಣಾ ಸೇರಿ ಹಲವು ನೀರಾವರಿ, ಅಲ್ಲದೆ ಬೆಂಗಳೂರು ಹೊರತುಪಡಿಸಿದ ಸಮಸ್ಯೆಗಳ ಬಗ್ಗೆಯೂ ಚರ್ಚಿಸಬೇಕು. ಪರಿಷತ್‌ನ 44 ಸದಸ್ಯರುಗಳೆಲ್ಲರೂ ಚರ್ಚೆಯಲ್ಲಿ ಭಾಗಿಯಾಗಬೇಕು. ನಾಳೆ ಆಡಳಿತ ಪಕ್ಷ, ವಿರೋಧ ಪಕ್ಷಗಳ ಎಲ್ಲಾ ಸದಸ್ಯರುಗಳ ಸಭೆ ಕರೆಯಲಾಗಿದೆ. ಯಾವುದೇ ವಿಷಯ ಇಟ್ಟುಕೊಂಡು ಧರಣಿ ನಡೆಸಿ ಕಾಲಹರಣ ಮಾಡಬಾರದೆಂದು ನಾಳೆಯ ಸಭೆಯಲ್ಲಿ ತಿಳಿಸಲಾಗುತ್ತದೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here