ಬಾಣಂತಿಯರ ಸಾವು: ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು – ದಿನೇಶ್ ಗುಂಡೂರಾವ್

0
Spread the love

ಬೆಳಗಾವಿ: ಬಳ್ಳಾರಿಯ ಬಿಮ್ಸ್​ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಅಧಿವೇಶನಕ್ಕೂ ಮುನ್ನ ಮಾತನಾಡಿದ ಅವರು,

Advertisement

ಬಾಣಂತಿಯರ ಸಾವಿನ ಬಗ್ಗೆ ನಿಜಾಂಶಗಳ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಬಾಣಂತಿಯರ ಮರಣಗಳು ಆಗುತ್ತಿವೆ, ಅದಕ್ಕೆ ವೈದ್ಯಕೀಯ ಕಾರಣ ಎನ್ನಲಾಗದು. ಅದನ್ನೆ ಮುಂದಿಟ್ಟುಕೊಂಡು ರಾಜಕೀಯ ಉದ್ದೇಶದಿಂದ ಮಾತನಾಡಬಾರದು ಎಂದು ಅವರು ವಿರೋಧ ಪಕ್ಷಗಳ ವಿರುದ್ದ ಕಿಡಿ ಕಾರಿದರು.

ವ್ಯವಸ್ಥೆಗಳನ್ನು ಸರಿಪಡಿಸುವ ಕೆಲಸ ಸಾಕಷ್ಟು ಆಗುತ್ತಿದೆ. ಬಾಣಂತಿಯರ ಮರಣಗಳ ಬಗ್ಗೆ ಬೆಳಗಾವಿ ಅಧಿವೇಶನಲ್ಲಿ ಉತ್ತರ ಕೊಡಲಾಗುವುದು. ಸರ್ಕಾರ ಮೇಡಿಕಲ್ ಮಾಫಿಯಾ ಹಿಡಿತಕ್ಕೆ ಸಿಲುಕಿದೆಯಾ ಎಂಬ ವಿಚಾರವಾಗಿ ಸದನದಲ್ಲಿ ನಾನು ಚರ್ಚೆ ಮಾಡುತ್ತೇನೆ ಎಂದರು. ಆರೋಗ್ಯ ಇಲಾಖೆ ಬಗ್ಗೆ ಮಾತನಾಡಬೇಕು. ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣದ ವಿಚಾರವಾಗಿ ನಮಗೆ ಬಹಳ ಚಿಂತೆ ಇದೆ. ಸರ್ಕಾರವೂ ಎಚ್ಚೆತ್ತುಕೊಂಡಿದೆ ಎಂದರು.

 


Spread the love

LEAVE A REPLY

Please enter your comment!
Please enter your name here