ಬಾಣಂತಿಯರು, ಹಸುಗೂಸುಗಳ ಸಾವು: ಬಳ್ಳಾರಿ ಪ್ರಕರಣಗಳಿಗೂ, ಬ್ರಿಮ್ಸ್‌ʼಗೂ ಸಂಬಂಧ ಇಲ್ಲ – ಲಕ್ಷ್ಮೀ ಹೆಬ್ಬಾಳ್ಕರ್‌

0
Spread the love

ಬೆಳಗಾವಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದು, ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಬಾಣಂತಿಯರು, ಹಸುಗೂಸುಗಳ ಸಾವು ಪ್ರಕರಣಕ್ಕೆ ಸಂಬಂಧ ಪಟ್ಟಂತೆ  ಬಳ್ಳಾರಿ ಪ್ರಕರಣಗಳಿಗೂ, ಬ್ರಿಮ್ಸ್‌ʼಗೂ ಸಂಬಂಧ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

Advertisement

ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಮ್ಸ್‌ನಲ್ಲಿ ಬಾಣಂತಿಯರು, ಹಸುಗೂಸುಗಳ ಸಾವಿನ ಬಗ್ಗೆ ಈಗಾಗಲೇ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಯಾವ ಕಾರಣಕ್ಕೆ ಸಾವಿನ ಪ್ರಕರಣಗಳು ಸಂಭವಿಸಿವೆ. ಸಾವನ್ನು ತಡೆಯಲು ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು.

ಏನೆಲ್ಲಾ ಮಾಡಬೇಕೋ ಮಾಡುತ್ತಿದ್ದೇವೆ. ನಮ್ಮ ಜಿಲ್ಲೆಯಲ್ಲಿ 54 ಲಕ್ಷ ಜನಸಂಖ್ಯೆ ಇದೆ. ಹೀಗಾಗಿ ಅಂಕಿಅಂಶ ಹೆಚ್ಚಾಗಿ ಕಾಣುತ್ತಿದೆ. ಕಾರವಾರ ಸೇರಿದಂತೆ ಅನೇಕ ಕಡೆಗಳಿಂದ ಬೆಳಗಾವಿ ಆಸ್ಪತ್ರೆಗೆ ಬರುತ್ತಾರೆ ಎಂದು ಹೇಳಿದ್ದಾರೆ.

ಇನ್ನೂ ಬಾಣಂತಿಯರು, ಹಸುಗೂಸುಗಳ ಸಾವಿಗೆ ಬಹಳಷ್ಟು ಕಾರಣಗಳಿವೆ. ಬಳ್ಳಾರಿ ಪ್ರಕರಣಗಳಿಗೂ, ಬ್ರಿಮ್ಸ್‌ಗೂ ಸಂಬಂಧ ಇಲ್ಲ. ಕಬ್ಬಿನಾಂಶ ಕೊರತೆ, ಪ್ರೀ ಮೆಚ್ಯುರ್‌ ಬೇಬಿ ಹೀಗೆ ಅನೇಕ ಕಾರಣಗಳಿವೆ. ಒಂದು ಲಕ್ಷ ಮಕ್ಕಳು ಹುಟ್ಟಿದರೆ 28 ಮಕ್ಕಳು ಅದರಲ್ಲಿ ತೀರಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here