ಬೆಂಗಳೂರು:- ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರು ಇಂದು ನಿಧನ ಆಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ SM ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ಬಹುಕಾಲ ಕಾಂಗ್ರೆಸ್ನಲ್ಲಿಯೇ ಗುರುತಿಸಿಕೊಂಡಿದ್ದ ಎಸ್.ಎಂ.ಕೃಷ್ಣ ಅವರು ಬದಲಾದ ರಾಜಕೀಯ ಸನ್ನಿವೇಶಗಳಿಂದಾಗಿ ಮಾರ್ಚ್ 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.
ಬಿಜೆಪಿ ಸೇರ್ಪಡೆಯಾದ 2018ರ ವಿಧಾನಸಭಾ ಚುನಾವಣೆಯಲ್ಲಿ ಕೊನೆಯದಾಗಿ ಬಹಿರಂಗವಾಗಿ ಪ್ರಚಾರ ನಡೆಸಿದ್ದರು. ತದನಂತರ ಸಕ್ರಿಯ ರಾಜಕಾರಣದಿಂದ ಎಸ್.ಎಂ.ಕೃಷ್ಣ ಹಿಂದೆ ಸರಿದಿದ್ದರು ಎನ್ನಲಾಗಿದೆ.



