ಶಿವಮೊಗ್ಗ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್ಎಂ ಕೃಷ್ಣ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅದರಂತೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿಡಿಯೋ ಮಾಡಿ ಸಂತಾಪ್ ಸೂಚಿಸಿದ್ದಾರೆ.
ಎಸ್.ಎಂ ಕೃಷ್ಣ ಅವರ ಅಗಲಿಕೆಯಿಂದ ನೋವಾಗಿದೆ. ಅವರು ಒಬ್ಬ ಸಜ್ಜನ ರಾಜಕಾರಣಿ ಆಗಿದ್ದರು. ಅವರ ಪತ್ನಿ ಪ್ರೇಮಾ ತೀರ್ಥಹಳ್ಳಿಯವರು, ಅವರು ಇಲ್ಲಿನ ಅಳಿಯ. ಈ ಹಿನ್ನಲೆಯಲ್ಲಿ ನನ್ನ ಮೇಲೆ ವಿಶೇಷ ಪ್ರೀತಿ ಅವರಿಗೆ ಇತ್ತು ಎಂದಿದ್ದಾರೆ.
ಕ್ಷೇತ್ರದ ಯಾವುದೇ ಕಾಮಗಾರಿ ಇದ್ದರೂ ಅವರು ಅನುದಾನ ನೀಡುತ್ತಿದ್ದರು. ರಾಜ್ಯದ ಸಿಎಂ ಆಗಿ ಎಲ್ಲರೂ ನೆನಪು ಇರುವ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಬೆಂಗಳೂರನ್ನು ಸಿಂಗಾಪುರ ಮಾಡಬೇಕು ಎನ್ನುವ ಕನಸು ಕಂಡಿದ್ದರು. ಐಟಿ ಬಿಟಿ ಕಂಪನಿಗಳನ್ನು ತಂದು ಬೆಂಗಳೂರಿನ ಅಭಿವೃದ್ಧಿ ಮಾಡಿದ್ದಾರೆ. ಕೇಂದ್ರ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಅವರು ನೆನಪಿಸಿಕೊಂಡಿದ್ದಾರೆ.



