Raw Onion: ಹಸಿ ಈರುಳ್ಳಿ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ..?

0
Spread the love

ಈರುಳ್ಳಿಯನ್ನು ಹಸಿಯಾಗಿ, ಬಿಸಿಯಾಗಿ, ಹುರಿದು, ಕರಿದು ಹೇಗೇ ಆದರೂ ಭಾರತೀಯರ ನಾಲಿಗೆಗಳಿಗೆ ಅದು ಬೇಕು. ಸಾವಿರಾರು ವರ್ಷಗಳ ಹಿಂದೆ ಮಧ್ಯ ಏಷ್ಯಾದ ಪ್ರಾಂತ್ಯಗಳಿಂದ ಜಗತ್ತಿಗೆ ಪರಿಚಿತವಾದ ಈ ಘಾಟು ಗಡ್ಡೆಗಳು ಅಡಿಯಿಂದ ಮುಡಿಯವರೆಗೆ ಔಷಧಿಗಾಗಿ ಸಹ ಬಳಕೆಯಾಗುತ್ತಿವೆ.

Advertisement

ಹೌದು ಭಾರತೀಯ ಆಹಾರ ಪದ್ಧತಿಯಲ್ಲಿ ಈರುಳ್ಳಿ ಪ್ರಧಾನವಾಗಿದೆ. ಈರುಳ್ಳಿ ಆಹಾರಕ್ಕೆ ಪರಿಮಳ ನೀಡುವುದರೊಂದಿಗೆ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಇದಲ್ಲದೇ ಈರುಳ್ಳಿ ತಿನ್ನುವುದರಿಂದ ನಾನಾ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಹಸಿ ಈರುಳ್ಳಿ ಸೇವನೆಯಿಂದ ಆಗುವ ಪ್ರಯೋಜನಗಳು

ಕೂದಲಿನ ಆರೋಗ್ಯ ಕಾಪಾಡುತ್ತದೆ : ಈರುಳ್ಳಿ ನಿತ್ಯದ ಆಹಾರದಲ್ಲಿ ಬಳಸುವುದಲ್ಲದೆ ಹಸಿಯಾಗಿ ಸೇವನೆ ಮಾಡುವುದರಿಂದ ಕೂದಲಿನ ಆರೋಗ್ಯವು ಸುಧಾರಣೆಯಾಗುತ್ತದೆ. ಅದಲ್ಲದೇ ಹಸಿ ಈರುಳ್ಳಿಯ ರಸವನ್ನು ತಲೆಗೆ ಹಚ್ಚುವುದರಿಂದ ತಲೆಹೊಟ್ಟು ಸಮಸ್ಯೆಗೆ ಮುಕ್ತಿ ಸಿಗುತ್ತದೆ.

 ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ : ಈರುಳ್ಳಿಯಲ್ಲಿ ಕ್ವೆರ್ಸೆಟಿನ್‌ ನಂತಹ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಇದು ಕ್ಯಾನ್ಸರ್ ಸಂಬಂಧಿ ಆರೋಗ್ಯ ಸಮಸ್ಯೆಯ ಅಪಾಯವನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ : ಹಸಿ ಈರುಳ್ಳಿಯಲ್ಲಿ ಆಹಾರದ ನಾರಿನಾಂಶ ಅಧಿಕವಾಗಿದ್ದು, ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮಲಬದ್ಧತೆ, ಮೂಲವ್ಯಾಧಿ ಸೇರಿದಂತೆ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ : ಹಸಿ ಈರುಳ್ಳಿ ಸೇವನೆ ಮಾಡುವುದರಿಂದ ರೋಗ ನಿರೋಧಕ ಶಕ್ತಿಯನ್ನು ಸುಧಾರಿಸಿ, ಆರೋಗ್ಯ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳುತ್ತದೆ.

ಚರ್ಮದ ಆರೋಗ್ಯಕ್ಕೆ ಸಹಕಾರಿ : ಈರುಳ್ಳಿಯಲ್ಲಿರುವ ವಿಟಮಿನ್ ಸಿ ಮತ್ತು ಕೆ, ಹಾಗೂ ಜೀವಸತ್ವಗಳು ಪಿಗ್ಮೆಂಟೇಶನ್ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಸೂರ್ಯನ ಹಾನಿಕಾರಕ ಯುವಿ ಕಿರಣಗಳಿಂದ ಚರ್ಮವನ್ನು ರಕ್ಷಿಸಿ ಚರ್ಮವನ್ನು ಆರೋಗ್ಯಯುತವಾಗಿರಿಸುತ್ತದೆ. ಕೆಲವರು ಚರ್ಮದ ಆರೋಗ್ಯವನ್ನು ಕಾಪಾಡಲು ಈರುಳ್ಳಿಯನ್ನು ಫೇಸ್ ಪ್ಯಾಕ್ ಆಗಿ ಬಳಸುತ್ತಾರೆ.

ಹೃದಯದ ಆರೋಗ್ಯ ಹೆಚ್ಚಿಸಲು ಸಹಕಾರಿ : ಈರುಳ್ಳಿಯಲ್ಲಿ ಫ್ಲೋವೊನೈಡ್ ಗಳು ಮತ್ತು ಥಿಯೋಸೆಲ್ಫಿನೇಟ್ ಗಳು ಸಮೃದ್ಧವಾಗಿದೆ. ಫ್ಲೋವೊನೈಡ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಮೂಳೆಗಳನ್ನು ಬಲಪಡಿಸುತ್ತದೆ : ಈರುಳ್ಳಿಯಲ್ಲ ಕ್ಯಾಲ್ಸಿಯಂ ಅಂಶವು ಅಧಿಕವಾಗಿದ್ದು, ಹಸಿ ಈರುಳ್ಳಿ ಸೇವನೆ ಮಾಡುವುದರಿಂದ ಮೂಳೆಗಳನ್ನು ಬಲ ಪಡಿಸುತ್ತದೆ.


Spread the love

LEAVE A REPLY

Please enter your comment!
Please enter your name here