ಬಾಲಿವುಡ್ ನಟಿ, ಮಾಜಿ ನೀಲಿ ಚಿತ್ರಗಳ ತಾರೆ ಡಾಲ್ ಸನ್ನಿ ಲಿಯೋನ್ ಭಾನುವಾರ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದರು. ಸನ್ನಿ ಬೆಂಗಳೂರಿನಲ್ಲಿ ಪಾರ್ಟಿ ಮಾಡಿ ಸಂಭ್ರಮಿಸಿದ್ದು ಇದೇ ವೇಳೆ ಬೆಂಗಳೂರು ಮತ್ತು ಕನ್ನಡ ಸಿನಿಮಾಗಳ ಮೇಲಿನ ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ನಲ್ಲಿರುವ ಐಶಾರಾಮಿ ಕ್ಲಬ್ನಲ್ಲಿ ನಡೆದ ಡಿಜೆ ಪಾರ್ಟಿಗೆ ಸನ್ನಿ ಲಿಯೋನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಪಾರ್ಟಿಯಲ್ಲಿ ಭಾಗಿಯಾಗಿ ಸನ್ನಿ ಭರ್ಜರಿಯಾಗಿಯೇ ಸ್ಟೆಪ್ ಹಾಕಿದ್ದಾರೆ. ಸನ್ನಿ ಡಿಜೆ ಪಾರ್ಟಿಯಲ್ಲಿ ಭಾಗವಹಿಸಿದ್ದ ಬೆಂಗಳೂರು ಜನತೆ ಕುಣಿದು ಕುಪ್ಪಳಿಸಿ ಸಖತ್ ಎಂಜಾಯ್ ಮಾಡಿದ್ದಾರೆ.
ಬುಕ್ ಮೈ ಶೋನಲ್ಲಿ ಈ ಪಾರ್ಟಿಯ ಟಿಕೆಟ್ಳನ್ನು ಮಾರಾಟ ಮಾಡಲಾಗಿತ್ತು. ಪಾರ್ಟಿಗೆ ಎಂಟ್ರಿ ಕೊಡುವ ಮುನ್ನ ಮಾಧ್ಯಮದವರೊಟ್ಟಿಗೆ ಸನ್ನಿ ಲಿಯೋನ್ ಸಂವಾದ ನಡೆಸಿದರು. ಈ ಸಮಯದಲ್ಲಿ ಬೆಂಗಳೂರಿನ ಬಗ್ಗೆ, ಪಾರ್ಟಿ ಬಗ್ಗೆ ಮತ್ತು ಕನ್ನಡ ಸಿನಿಮಾ ಬಗ್ಗೆ ತಮ್ಮ ಮನದಾಳ ಹಂಚಿಕೊಂಡರು.
”ನನಗೆ ಬೆಂಗಳೂರು ಎಂದರೆ ಇಷ್ಟ. ಹಾಗಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ. ಈ ಡಿಜೆ ಪಾರ್ಟಿಯಲ್ಲಿ ಭಾಗವಹಿಸುತ್ತಿದ್ದು, ಸಖತ್ ಎಕ್ಸೈಟ್ ಆಗಿದ್ದೇನೆ. ಕನ್ನಡದಲ್ಲಿ ಅವಕಾಶಗಳು ಬಂದರೆ ಸಿನಿಮಾ ಮಾಡುತ್ತೇನೆ. ಡಿಜೆ ಪಾರ್ಟಿಯಲ್ಲಿ ಎಲ್ಲರೂ ಎಂಜಾಯ್ ಮಾಡೋಣ, ಫನ್ ಮಾಡೋಣ ಎಂದರು.