ಮಂಡ್ಯ:- ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರು ಬುಧವಾರ ಮುಂಜಾನೆ ನಿಧನ ಹೊಂದಿದ್ದು, ಇಂದು ಅಂತ್ಯಕ್ರಿಯೆ ನಡೆಯಲಿದೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ತಮ್ಮ ಹುಟ್ಟೂರು ಸೋಮನಹಳ್ಳಿಯಲ್ಲಿ ನಡೆಯಲಿದ್ದು, ಡಿಕೆ ಶಿವಕುಮಾರ್ ಅವರ ಅಳಿಯನೂ ಆಗಿರುವ ಎಸ್ಎಂಕೆ ಮೊಮ್ಮಗ ಅಮರ್ಥ್ಯ ಸಿದ್ಧಾರ್ಥ್ ಚಿತೆಗೆ ಅಗ್ನಿಸ್ಪರ್ಶ ನೆರವೇರಿಸಲಿದ್ದಾರೆ.
ಈಗಾಗಲೇ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ ಡಿಐಜಿ ಬೋರಲಿಂಗಯ್ಯ, ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ನಿಯೋಜಿಸಲಾಗಿದೆ. 700ಕ್ಕೂ ಹೆಚ್ಚು ಸಿಬ್ಬಂದಿ, ಕೆಎಸ್ಆರ್ಪಿ, ಡಿಎಆರ್ ತುಕಡಿ ಸೇರಿ 1,000ಕ್ಕೂ ಹೆಚ್ಚು ಪೊಲೀಸ್ ನಿಯೋಜನೆ ಮಾಡಲಾಗಿದೆ.
ಎಸ್ಎಂಕೆ ಅಂತ್ಯಕ್ರಿಯೆ ನೆರವೇರಿಸಲು ಅರಣ್ಯ ಇಲಾಖೆಯಿಂದ ಶ್ರೀಗಂಧದ ಕಟ್ಟಿಗಗಳನ್ನು ಪೂರೈಕೆ ಮಾಡಲಾಗಿದ್ದು, ಚಿತೆಗೆ ಸಿದ್ಧತೆ ನಡೆಯುತ್ತಿದೆ.