ಅನುಕಂಪದಿಂದ ಕೂಡಿದ ವ್ಯಕ್ತಿತ್ವ ಅವರದ್ದು: SM ಕೃಷ್ಣ ನೆನೆದು ನಟಿ ರಮ್ಯಾ ಭಾವುಕ ಪೋಸ್ಟ್!

0
Spread the love

ಮಾಜಿ ಸಿಎಂ SM ಕೃಷ್ಣ ಅವರ ನಿಧನದ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ನಟಿ ರಮ್ಯಾ ಅವರು ಭಾವುಕ ಪೋಸ್ಟ್ ಹಾಕಿದ್ದಾರೆ. ಅವರು ಬರೆದಿರುವ ಒನ್ನೊಂದು ಸಾಲುಗಳು ಹೃದಯವನ್ನು ತಲುಪುವಂತಿದೆ.

Advertisement

ಹೌದು, ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ನಟಿ ರಮ್ಯಾ ಅವರು, ಕರುನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ ಮಾಜಿ ಸಿಎಂ ಎಸ್‌.ಎಂ‌ ಕೃಷ್ಣ ಅವರ ಅಗಲಿಕೆಯ ಕುರಿತು ನೋವಿನ ನುಡಿಗಳನ್ನು ಹಂಚಿಕೊಂಡಿದ್ದಾರೆ.

ʻʻಒಬ್ಬ Statesman” ಎಲ್ಲಾ ಅರ್ಥಗಳಲ್ಲಿ ರಾಜಕಾರಣಿ ಎಂದಿಗೂ ಅಲ್ಲ. ಅವರು ಯಾರನ್ನೂ, ತಮ್ಮ ಪ್ರತಿಸ್ಪರ್ಧಿಗಳನ್ನು ಸಹ ದ್ವೇಷಿಸಿ ಮಾತನಾಡಲಿಲ್ಲ. ಭವಿಷ್ಯದ ದೃಷ್ಟಿಯುಳ್ಳವ, ದಯಾಮಯಿ ಅನುಕಂಪದಿಂದ ಕೂಡಿರುವ, ಸುಂದರವಾಗಿ ಮಾತನಾಡುವ, ವಿದ್ಯಾವಂತ, ಹಾಸ್ಯಭರಿತ ವ್ಯಕ್ತಿತ್ವದವರು ನೀವು…

ನಿಮ್ಮಂತೆ ಮತ್ತೊಬ್ಬರು ಇರಲು ಆಗುವುದಿಲ್ಲ.. ಎಲ್ಲದಕ್ಕಾಗಿ ಧನ್ಯವಾದಗಳು… ಎಂದು ಬರೆದುಕೊಂಡಿದ್ದಾರೆ. ಕೊನೆಯಲ್ಲಿ ನೀವು ಈಗ ನಿಮ್ಮ ಬೆಸ್ಟ್‌ಫ್ರೆಂಡ್‌ ಜೊತೆಗೆ ಇದ್ದೀರಾ ಎಂದು ಬರೆದು ಹಾರ್ಟ್‌ ಎಮೊಜಿ ಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here