ರಾಯಚೂರು:- ಬೀದಿನಾಯಿಗಳ ದಾಳಿಯಿಂದ ಯುವತಿಯೋರ್ವಳು ಕೋಮಾಗೆ ಜಾರಿ ಬಳಿಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ನಗರದ ಮಡ್ಡಿಪೇಟೆಯಲ್ಲಿ ಜರುಗಿದೆ.
Advertisement
ಯುವತಿಯನ್ನು ಮಹಾದೇವಿ ಮೃತ ದುರ್ದೈವಿ ಎನ್ನಲಾಗಿದೆ. ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾಳೆ.
ಮಂಗಳವಾರ ಬೆಳಗ್ಗೆ ದೇವಾಲಯಕ್ಕೆ ಹೊರಟಿದ್ದ ಯುವತಿ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ಮಾಡಿತ್ತು. ನಾಯಿಗಳ ದಾಳಿಗೆ ಹೆದರಿದ ಯುವತಿ ಕೆಳಗೆ ಬಿದ್ದಿದ್ದು ತಲೆಗೆ ಬಲವಾದ ಪೆಟ್ಟಾಗಿತ್ತು. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ತಲೆಗೆ ಪೆಟ್ಟು ಬಿದ್ದಿದ್ದರಿಂದ ರಕ್ತ ಹೆಪ್ಪುಗಟ್ಟಿ ಯುವತಿ ಕೋಮಾ ಸ್ಥಿತಿಗೆ ಹೋಗಿದ್ದಳು.
ಯುವತಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಾವನ್ನಪ್ಪಿದ್ದಾಳೆ.


