ಪಿಡಿಒ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಿರೋ ಫೋಟೋ ವೈರಲ್!

0
Spread the love

ಧಾರವಾಡ:- ಇಲ್ಲಿನ ಪಿಡಿಒ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ಎಸಗಿರುವ ಆರೋಪ ಕೇಳಿ ಬಂದಿದ್ದು, ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಿರೋ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Advertisement

ಧಾರವಾಡದ ಕೆಎನ್‌ಕೆ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ಕೈ ಸೇರುವ ಮೊದಲೇ ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಸಾಮಾನ್ಯ ಜ್ಞಾನ ವಿಷಯಕ್ಕೆ ಸಂಬಂಧಪಟ್ಟ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು ಎನ್ನಲಾಗಿದೆ.

ಪಿಡಿಒ ನೇಮಕಾತಿಗೆ ಸಂಬಂಧಿಸಿ ಡಿಸೆಂಬರ್ 8ರಂದು ನಡೆದಿತ್ತು. ಹೀಗಾಗಿ ತಪ್ಪಿತಸ್ಥರನ್ನು ಶಿಕ್ಷಿಸಿ ಮರುಪರೀಕ್ಷೆಗೆ ಆದೇಶ ನೀಡಬೇಕೆಂಬ ಆಗ್ರವೂ ವ್ಯಕ್ತವಾಗಿದೆ. ಇದರೊಂದಿಗೆ, ಈ ಸಲವೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಕೆಪಿಎಸ್‌ಸಿ ವಿಫಲವಾಯ್ತಾ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಪಿಡಿಒ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾನ್ಯವಾಗಿ ಮೂರು ಹಂತದ ಸೀಲ್ ಭದ್ರತೆ ಹೊಂದಿರುತ್ತವೆ. ಪರೀಕ್ಷಾ ಕೇಂದ್ರದ ಪ್ರಶ್ನೆ ಪತ್ರಿಕೆಗಳ ಬಂಡಲ್‌ಗೆ ಸಮಗ್ರವಾಗಿ ಪ್ಲಾಸ್ಟಿಕ್ ಕವರ್​ನ ಸೀಲ್ ಹಾಕಿರಲಾಗುತ್ತದೆ.

ಬಳಿಕ ಆಯಾ ಪರೀಕ್ಷಾ ಕೊಠಡಿಯ ಪ್ರಶ್ನೆ ಪತ್ರಿಕೆಗಳಿಗೆ ಕಾಗದದ ಕವರ್​ನ ಜೊತೆಗೆ ಸೀಲ್ ಹಾಕಿರುತ್ತಾರೆ. ಕೊನೆಗೆ ಪ್ರತಿಯೊಂದು ಪ್ರಶ್ನೆ ಪತ್ರಿಕೆಗೂ ಪ್ರತ್ಯೇಕ ಸೀಲ್ ಇರುತ್ತದೆ. ಆದರೆ, ಪ್ರಶ್ನೆ ಪತ್ರಿಕೆಯ ಮೇಲಿನ ಸೀಲ್ ಓಪನ್ ಮಾಡಿ ಪುನಃ ಆಂಟಿಸಿದ್ದಾರೆಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.

ಕೆಪಿಎಸ್‌ಸಿ ಸರಿಯಾಗಿ ಪರೀಕ್ಷೆ ನಡೆಸಿಲ್ಲವೆಂದು ಅಭ್ಯರ್ಥಿಗಳು ಆರೋಪ ಮಾಡಿದ್ದು, ಮರುಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಕೆಪಿಎಸ್‌ಸಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವಿಯನ್ನೂ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here