ಬೆಳಗಾವಿ:- ಸಿಎಂ ಕುಮ್ಮಕ್ಕಿನಿಂದ ಪಂಚಮಸಾಲಿ ಹೋರಾಟ ಹತ್ತಿಕ್ಕುವ ಯತ್ನ ನಡೆದಿದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ವಿಜಯೇಂದ್ರ, 2A ಮೀಸಲಾತಿಗಾಗಿ ಆಗ್ರಹಿಸಿ ಸುವರ್ಣಸೌಧದ ಮುಂಭಾಗ ಪ್ರತಿಭಟನೆ ಮಾಡುತ್ತಿದ್ದ ಪಂಚಮಸಾಲಿ ಹೋರಾಟಗಾರರ ಮೇಲೆ ಖಾಕಿ ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ.
ಪೊಲೀಸರ ಮೂಲಕ ಸಿಎಂ ಸಿದ್ದರಾಮಯ್ಯ, ಪಂಚಮಸಾಲಿ ಹೋರಾಟವನ್ನು ಹತ್ತಿಕ್ಕುವ ಯತ್ನ ನಡೆಸಿದ್ದಾರೆ ಎಂದು ಬಿವೈ ವಿಜಯೇಂದ್ರ ಆಕ್ರೋಶ ಹೊರ ಹಾಕಿದರು.
ಇನ್ನೂ ಸಿಎಂ ಪ್ರತಿಭಟನಾ ಸ್ಥಳಕ್ಕೆ ಹೋಗಿ ಅಹವಾಲು ಸ್ವೀಕರಿಸಬೇಕಿತ್ತು. ಸಿಎಂ ಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಲಾಠಿ ಪ್ರಹಾರ ಮಾಡಿ ಪ್ರತಿಭಟನಾಕಾರರನ್ನ ಬೆದರಿಸುವ ಯತ್ನ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ. ಕೂಡಲೇ ಸಿಎಂ ಕ್ಷಮೆಯಾಚಿಸಬೇಕು.
ಇದೇ ವಿಚಾರವಾಗಿ ಸುವರ್ಣ ಸೌಧದ ಎದುರು ಬಿಜೆಪಿ ಪ್ರತಿಭಟನೆ ಮಾಡುತ್ತೆ. ಸದನದಲ್ಲೂ ಪ್ರಸ್ತಾಪಿಸಿ ಸಿಎಂ ಉತ್ತರ ನೀಡುವಂತೆ ಮಾಡ್ತೇವೆ ಎಂಎಂ ವಿಜಯೇಂದ್ರ ಹೇಳಿಕೆ ಕೊಟ್ಟಿದ್ದಾರೆ.