ವಿಜಯಸಾಕ್ಷಿ ಸುದ್ದಿ, ಗದಗ: ಬೆಂಗಳೂರಿನ ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮೀನುಗಾರರ ವಿಭಾಗ ವತಿಯಿಂದ ವಿಶ್ವ ಮೀನುಗಾರರ ದಿನಾಚರಣೆ ಹಾಗೂ ಕಾರ್ಯಕರ್ತರ ಸಮ್ಮೇಳನದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಮೀನುಗಾರರ ವಿಭಾಗದ ಜಿಲ್ಲಾಧ್ಯಕ್ಷ ಗುರಪ್ಪ ತಿರ್ಲಾಪೂರರನ್ನು ಸನ್ಮಾನಿಸಲಾಯಿತು.
Advertisement
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮೀನುಗಾರರ ವಿಭಾಗ ರಾಜ್ಯಾಧ್ಯಕ್ಷ ಮಂಜುನಾಥ ಸುಣಗಾರ, ಗದಗ ಜಿಲ್ಲೆಯ ಕಾಂಗ್ರೆಸ್ ಮೀನುಗಾರರ ವಿಭಾಗದ ಪ್ರಧಾನ ಕಾರ್ಯದರ್ಶಿ ರಾಮಣ್ಣ ಇರಕಲ್ಲ, ಕಾಂಗ್ರೆಸ್ ಮೀನುಗಾರರ ಗದಗ-ಬೆಟಗೇರಿ ಶಹರ ಘಟಕ ಅಧ್ಯಕ್ಷ ಸಂಗಮೇಶ ಹಾದಿಮನಿ, ರವಿಕುಮಾರ ಗುಡಿಸಾಗರ, ಮಂಜುನಾಥ ಗುಡಿಸಾಗರ, ಅಮಿತ ಪೂಜಾರ, ಹುಚ್ಚಪ್ಪ ನಾಟೀಕಾರ, ಹರೀಶ ಬಾರಕೇರ, ಶಂಕರಗೌಡ ರಾಹುತ್ ಉಪಸ್ಥಿತರಿದ್ದರು.