ಮನೋರಮಾ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮನೋರಮಾ ಮಹಾವಿದ್ಯಾಲಯದಲ್ಲಿ ಅಂಬಿಕಾ ಬ್ಲಡ್ ಬ್ಯಾಂಕ್ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸ ವೃಂದದ 60ಕ್ಕೂ ಹೆಚ್ಚು ಜನ ರಕ್ತದಾನ ಮಾಡಿದರು.

Advertisement

ಅಂಬಿಕಾ ಬ್ಲಡ್ ಬ್ಯಾಂಕ್ ಮುಖ್ಯಸ್ಥ ಡಾ. ಅನಂತ ಶಿವಪುರ ಮಾತನಾಡಿ, ದಾನಗಳಲ್ಲಿಯೇ ಶ್ರೇಷ್ಠ ದಾನ ರಕ್ತದಾನ. ಅದರ ಜೊತೆಗೆ ಆರೋಗ್ಯ ಚೇತರಿಕೆಗೆ ಪ್ರತಿಯೊಬ್ಬರೂ ರಕ್ತದಾನ ಮಾಡುವುದು ಅವಶ್ಯಕ ಎಂದರು.

ಸಭೆಯ ಅದ್ಯಕ್ಷತೆ ವಹಿಸಿದ್ದ ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ ರಕ್ತದಾನ ಮಾಡಿದ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತಾ, ರಕ್ತದಾನ ಮಾಡುವುದರಿಂದ ಒಂದು ಜೀವ ಉಳಿಸಿದಂತೆ ಆಗುವುದು. ನಮ್ಮ ಆರೋಗ್ಯ ಸುಧಾರಿಸಲು ಕನಿಷ್ಠ ಆರು ತಿಂಗಳಿಗೊಮ್ಮೆ ರಕ್ತದಾನ ಮಡುವುದು ಆರೋಗ್ಯಕರ ಬೆಳವಣಿಗೆ ಎಂದರು.

ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎಸ್. ಹಿರೇಮಠ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಸ್ಥೆಯ ಕಾರ್ಯದರ್ಶಿ ಮಂಜುನಾಥ ಕುಡತರಕರ, ಸಂಸ್ಥೆಯ ನಿರ್ದೇಶಕರುಗಳಾದ ಸಂಜಯಕುಮಾರ ಕುಡತರಕರ, ಚೇತನ ಕುಡತರಕರ ಹಾಗೂ ಸಂಯೋಜಕರುಗಳಾದ ಪ್ರೊ. ಸವಿತಾ ಪೂಜಾರ, ಪ್ರೊ. ಅಲ್ವಿನಾ ಡಿ, ಪ್ರೊ. ಚೈತ್ರಾ ಡಿ, ಪ್ರೊ. ಶಾಹಿದಾ ಶಿರಹಟ್ಟಿ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here