ಪಂಚಮಸಾಲಿ ಸಮಾಜದಿಂದ ತಹಸೀಲ್ದಾರರಿಗೆ ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ರೋಣ: ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜ ಬಾಂಧವರ ಮೆಲೆ ನಡೆದ ಲಾಠಿ ಪ್ರಹಾರವನ್ನು ಖಂಡಿಸಿ ರೋಣ ತಾಲೂಕಾ ಪಂಚಮಸಾಲಿ ಸಮಾಜದವರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ನಾಗರಾಜ ಕೆ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Advertisement

ಪಟ್ಟಣದ ಸಿದ್ಧಾರೂಢ ಮಠದಿಂದ ಆರಂಭಗೊAಡ ಪ್ರತಿಭಟನಾ ಮೆರವಣಿಗೆ ಸುಡಿ ವೃತ್ತ, ಮುಲ್ಲಾನ ಭಾವಿ ಮೂಲಕ ಸಾಗಿ ಪೋತರಾಜನ ಕಟ್ಟೆಯ ಬಳಿ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು ರಾಜ್ಯ ಸರಕಾರದ ವಿರುದ್ಧ ತೀವೃ ಆಕ್ರೋಶ ಹೊರಹಾಕಿದರು.

ಶಾಂತ ರಿತಿಯಿಂದ ನಡೆಯುತ್ತಿದ್ದ ಹೋರಾಟವನ್ನು ಹತ್ತಿಕ್ಕಲು ಸರಕಾರವೇ ಪಿತೂರಿ ನಡೆಸಿದ್ದು, ಇದನ್ನು ಪಂಚಮಸಾಲಿ ಸಮಾಜ ಖಂಡಿಸುತ್ತದೆ. ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ಸಿಗವವರೆಗೂ ಹೋರಾಟ ನಿಲ್ಲುವುದಿಲ್ಲ. ಇದನ್ನು ರಾಜ್ಯದ ಮುಖ್ಯಮಂತ್ರಿಗಳು ಅರಿಯಬೇಕು. ಸಮಾಜದ ಪರವಾಗಿ ಹೋರಾಟ ಮಾಡಿದವರ ಮೆಲೆ ದಾಖಲಿಸಿರುವ ಪ್ರಕರಣಗಳನ್ನು ಈ ಕೂಡಲೇ ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಮಾಜದ ಮುಖಂಡರುಗಳು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here