ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ನೆಹರು ಯುವ ಕೇಂದ್ರ ಮತ್ತು ಶಾಸ್ತಿçÃಜಿ ಮಹಿಳಾ ಬಿ.ಎಡ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧೀಜಿ ಅವರ ಸ್ಮರಣಾರ್ಥವಾಗಿ ಭಾರತ ಸ್ವಾಂತತ್ರ್ಯ ಹೋರಾಟದಲ್ಲಿ ಗಾಂಧೀಜಿಯವರ ಪಾತ್ರ ವಿಷಯದ ಕುರಿತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
Advertisement
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಭಾಗವಹಿಸಿದ ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶಿಲ್ಪಾ ಹೊನ್ನಗುಡಿ ಗಾಂಧೀಜಿಯವರ ಬಗ್ಗೆ ವಿವರಣೆ ನೀಡಿದರು. ಮುಖ್ಯ ಅತಿಥಿಗಳಾಗಿ ನೆಹರು ಯುವ ಕೇಂದ್ರದ ಯುವ ಅಧಿಕಾರಿಗಳಾದ ಎನ್. ರಂಜನಿ, ರವಿ ಹೊಂಬಾಳಿ, ಲಲಿತಾ ಗೌಳಿ ಭಾಗವಹಿಸಿದ್ದರು.