ಸಿಂಗಾಪುರ:- 18 ವರ್ಷದ ಭಾರತದ ಗುಕೇಶ್ ಅವರು ವಿಶ್ವ ಚೆಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಚೀನಾದ ಪ್ರಶಸ್ತಿ ವಿಜೇತ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ಇಂದು ತಮ್ಮ 18 ನೇ ವಯಸ್ಸಿನಲ್ಲಿ ಕಿರಿಯ ವಿಶ್ವ ಚೆಸ್ ಚಾಂಪಿಯನ್ ಆಗಿದ್ದಾರೆ.
ಇನ್ನೂ ವಿಶ್ವ ಚೆಸ್ ಚಾಂಪಿಯನ್‌ಷಿಪ್ ಗೆದ್ದ ಬೆನ್ನಲ್ಲೇ ಭಾರತದ ಡಿ.ಗುಕೇಶ್ ಅವರ ಕಣ್ಣಲ್ಲಿ ಆನಂದಭಾಷ್ಪ ಧಾರೆಯಾಯಿತು. ವಿಶ್ವ ಚಾಂಪಿಯನ್‌ಷಿಪ್ ಗೆಲುವಿನ ಕನಸು ನನಸಾದ ಕ್ಷಣ ಗುಕೇಶ್ ಅವರಿಗೆ ತಮ್ಮ ಭಾವನೆಗಳನ್ನು ತಡೆದುಕೊಳ್ಳಲಿಲ್ಲ. ಅಲ್ಲದೆ ಭಾವುಕರಾಗಿ ಕಣ್ಣೀರು ಸುರಿಸಿದ್ದಾರೆ.
ಭಾರತದ 18 ವರ್ಷದ ಗ್ರ್ಯಾಂಡ್ ಮಾಸ್ಟರ್ ಗುಕೇಶ್ 14ನೇ ಹಾಗೂ ಅಂತಿಮ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ವಿಶ್ವ ಚಾಂಪಿಯನ್ ಗೌರವಕ್ಕೆ ಪಾತ್ರರಾದರು.
ಹಿಂದಿನ ವಿಶ್ವ ದಾಖಲೆಯನ್ನು ಗ್ಯಾರಿ ಕಾಸ್ಪರೋವ್ ಮಾಡಿದ್ದು 22ನೇ ವಯಸ್ಸಿಗೆ ಅನಾಟೊಲಿ ಕಾರ್ಪೋವ್ ಅವರನ್ನು ಸೋಲಿಸಿ 1985ರಲ್ಲಿ ವಿಶ್ವ ಚಾಂಪಿಯನ್ ಆಗಿದ್ದರು. ಇನ್ನು ಗುಕೇಶ್ ವಿಶ್ವನಾಥನ್ ಆನಂದ್ ನಂತರ ಭಾರತದ ಎರಡನೇ ವಿಶ್ವ ಚೆಸ್ ಚಾಂಪಿಯನ್ ಆಗಿದ್ದಾರೆ.