ವಿಜಯಸಾಕ್ಷಿ ಸುದ್ದಿ, ಗದಗ: ಆರೋಗ್ಯ ಇಲಾಖೆಯಲ್ಲಿ ಪ್ರಯೋಗಶಾಲಾ ತಂತ್ರಜ್ಞರಾಗಿ ಮುಂಡರಗಿ ತಾಲೂಕಿನ ಚಂತಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಎ.ಆರ್. ಪಾಟೀಲರಿಗೆ ದೆಹಲಿಯಲ್ಲಿ ಭಾರತಿಯ ದಲಿತ ಸಾಹಿತ್ಯ ಅಕಾಡೆಮಿಯ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ರಾಷ್ಟಿçÃಯ ಫೆಲೋಶಿಪ್ ಪ್ರಶಸ್ತಿಯನ್ನು ರಾಷ್ಟ್ರೀಯ ಅಧ್ಯಕ್ಷರಾದ ಡಾ.ಸಮನಾಕ್ಷರ ನೀಡಿ ಗೌರವಿಸಿದರು.
ಪ್ರಶಸ್ತಿಗೆ ಆಯ್ಕೆಯಾದ ಎ.ಆರ್. ಪಾಟೀಲರಿಗೆ ಭಾರತಿಯ ದಲಿತ ಸಾಹಿತ್ಯ ಅಕಾಡೆಮಿಯ ಗದಗ ಜಿಲ್ಲಾಧ್ಯಕ್ಷ ರವಿ ಗಡಾದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಸಿದ್ದಪ್ಪ ಲಿಂಗದಾಳ, ರಾಜ್ಯ ಪರಿಷತ್ ಸದಸ್ಯರಾದ ಮಲ್ಲಿಕಾರ್ಜುನ ಕಲಕಂಬಿ, ಅಜಯಕುಮಾರ ಕಲಾಲ, ವಾಚಿiÀiï.ಎನ್. ಕಡೇಮನಿ, ಮುತ್ತಪ್ಪ ಹಟ್ಟಿಮನಿ, ಎಸ್.ಬಿ. ಗಡಾದ, ಎಸ್.ಬಿ. ಕವಳಿಕಾಯಿ ಮುಂತಾದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.