ಬೆಂಗಳೂರು:- ವಿವಾಹಿತ ಮಹಿಳೆ ಕೊಂದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.
ಗಂಡನನ್ನು ಬಿಟ್ಟು ತನ್ನೊಂದಿಗೆ ಬರದಿದಕ್ಕೆ ಕೋಪಗೊಂಡ ಪ್ರಿಯಕರನಿಂದ ಈ ಕೃತ್ಯ ನಡೆದಿದೆ. 26 ವರ್ಷದ ಮೊವುಹಾ ಮಂಡಲ್ ಹತ್ಯೆಯಾದ ವಿವಾಹಿತೆ. 40 ವರ್ಷದ ಮಿಥುನ್ ಮಂಡಲ್ ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ ಎನ್ನಲಾಗಿದೆ.
ಗಂಡನನ್ನ ತೊರೆದು ತನ್ನೊಂದಿಗೆ ಬರದಿದಕ್ಕೆ ಸಿಟ್ಟಿನಿಂದ ವಿವಾಹಿತೆ ಮಹಿಳೆಯನ್ನ ಚಾಕುವಿನಿಂದ ಹತ್ಯೆ ಮಾಡಿದ್ದಾನೆ. ಬಳಿಕ ಬಂಧನ ಭೀತಿಯಿಂದ ತಾನು ಸಹ ಸೂಸೈಡ್ ಮಾಡಿಕೊಂಡಿದ್ದಾನೆ.
ಪಶ್ಚಿಮ ಬಂಗಾಳ ಮೂಲದವವರಾಗಿರುವ ಮಿಥುನ್ ಮಂಡಲ್ ಹಾಗೂ ಮೊವುಹಾ ಮಂಡಲ್ ಇಬ್ಬರೂ ಕಳೆದ ಏಳೆಂಟು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಮಿಥುನ್ ಹೌಸ್ ಕೀಪಿಂಗ್ ಮಾಡುತ್ತಿದ್ದರೆ, ಮೋವುಹಾ ಸಹ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಳು. ಹೀಗೆ ಒಬ್ಬರಿಗೊಬ್ಬರು ಪರಿಚಯವಾಗಿ ಪ್ರೀತಿಗೆ ತಿರುಗಿದೆ. ಬಳಿಕ ಗಂಡನನ್ನು ತೊರೆದುಬರುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ಮೊವುಹಾ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಸಹ ಪ್ರಾಣ ಕಳೆದುಕೊಂಡಿದ್ದಾನೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.