ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿಯ ತೀರ್ಪು ಹೈಕೋರ್ಟ್ ನಲ್ಲಿ ಇಂದು ಮಧ್ಯಾಹ್ನ ಪ್ರಕಟವಾಗಲಿದೆ.
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರೆಗ್ಯುಲರ್ ಜಾಮೀನು ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು ವಾದ ಮಂಡಿಸಿದ್ದು, ಎಸ್ ಪಿಪಿ ಪ್ರಸನ್ನ ಕುಮಾರ್ ಕೂಡ ಪ್ರತಿವಾದ ಮಂಡಿಸಿದ್ದಾರೆ. ಸುದೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ದಿನಾಂಕ ಘೋಷಿಸದೆ ತೀರ್ಪು ಕಾಯ್ದಿರಿಸಿದ್ದರು. ಜೊತೆಗೆ ಆದೇಶ ಬರುವವರೆಗೂ ನಟ ದರ್ಶನ್ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಿದ್ದರು.
ದರ್ಶನ್ ಜೊತೆಗೆ ಪವಿತ್ರಾ ಗೌಡ, ನಾಗರಾಜ್ ಮುಂತಾದವರಿಗೂ ಇಂದು ಮಹತ್ವದ ದಿನ. ಈ ಎಲ್ಲ ಆರೋಪಿಗಳ ಜಾಮೀನು ಅರ್ಜಿಯ ತೀರ್ಪು ಇಂದು ಹೊರ ಬೀಳಲಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾ. ವಿಶ್ವಜಿತ್ ಶೆಟ್ಟಿ ಪೀಠವು ಇಂದು ಮಧ್ಯಾಹ್ನ 2:30ಕ್ಕೆ ಆದೇಶ ಹೊರಡಿಸಲಿದೆ. ಇಂದು ಪ್ರಕಟ ಆಗಲಿರುವ ತೀರ್ಪಿನ ಮೇಲೆ ದರ್ಶನ್, ಪವಿತ್ರಾ ಗೌಡ ಮುಂತಾದವರು ಭವಿಷ್ಯ ನಿರ್ಧಾರ ಆಗಲಿದೆ.