ನವದೆಹಲಿ: ಕೆಲವೇ ದಿನಗಳ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಎನ್ಸಿಆರ್ನಲ್ಲಿ ಹೆಚ್ಚಿನ ಸಂಖ್ಯೆಯ ಶಾಲೆಗಳಿಗೆ ಬಾಂಬ್ ಸ್ಫೋಟದ ಬೆದರಿಕೆಗಳು ಬಂದಿದ್ದವು. ಶಾಲೆಗಳಲ್ಲದೆ, ಅನೇಕ ಶಾಪಿಂಗ್ ಮಾಲ್ಗಳಿಗೂ ಇಂತಹ ಬೆದರಿಕೆಗಳು ಕಳೆದ ಬಾರಿ ಬಂದಿದ್ದವು. ಇದೀಗ ಮತ್ತೆ ದೆಹಲಿಯ ಅನೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಗಳು ಬಂದಿದ್ದು, ಇದು ದೆಹಲಿ ಜನರ ಆತಂಕಕ್ಕೆ ಕಾರಣವಾಯಿತು.
ಸುದ್ದಿ ತಿಳಿಯುತ್ತಿದ್ದಂತೆ ತಕ್ಷಣಕ್ಕೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಮತ್ತು ಅಗ್ನಿ ಶಾಮಕದಳದ ಅಧಿಕಾರಿಗಳು ಭದ್ರತಾ ಕ್ರಮಕ್ಕೆ ಮುಂದಾಗಿದ್ದು, ತನಿಖೆ ಕೈಗೊಂಡಿದ್ದಾರೆ. ಉತ್ತರ ಕೈಲಾಶ್ನಲ್ಲಿರುವ ಡಿಪಿಎಸ್, ಸಲ್ವಾನ್, ಮಾರ್ಡನ್ ಮತ್ತು ಕೇಂಬ್ರಿಡ್ಜ್ ಶಾಲೆಗಳಿಗೆ ಬೆದರಿಕೆ ಕರೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯ ಆರಂಭಿಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.