ವಿದ್ಯಾರ್ಥಿಗಳಲ್ಲಿ ಸ್ವಾವಲಂಬನೆ ಇರಬೇಕು: ಕಲ್ಲೇಶ ಬಿ

0
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ವಿದ್ಯಾರ್ಥಿಗಳಲ್ಲಿ ಅದ್ಭುತವಾದ ಜ್ಞಾನವಿದ್ದು, ಅದನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು  ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಕಲ್ಲೇಶ ಬಿ ಹೇಳಿದರು.

Advertisement

ನಗರದ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಶುಕ್ರವಾರ 2024-25ಸಾಲಿನ ಕಾಲೇಜಿನ ಎಲ್ಲ ಸಹ ಪಠ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಸ್ವಾವಲಂಬನೆ ಇರಬೇಕು. ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು  ನಿಮ್ಮ ಗುರಿಗಳನ್ನು ಸಾಧಿಸಬೇಕು. ಒಂದು ಪಾಠವನ್ನು ಪದೇ ಪದೇ ಓದಬೇಕು. ದೃಢವಾದ ಮನಸ್ಸು ಮತ್ತು ಛಲ ಇರಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ. ಸತತವಾಗಿ ಪ್ರಯತ್ನ ಮಾಡಿದರೆ ಜಯ ಖಂಡಿತ ಸಿಗುತ್ತದೆ. ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ ಎಂದು ತಿಳಿಸಿದರು.

ಶಿಕ್ಷಣ ಪ್ರೇಮಿ ಬಿ.ಜಿ. ಕರಿಗಾರ್ ಮಾತನಾಡುತ್ತ, ವಿದ್ಯಾರ್ಥಿಗಳು ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇಂದು ಹೆಣ್ಣುಮಕ್ಕಳಿಗೆ ಓದುವುದಕ್ಕೆ ಬಹಳ ಅವಕಾಶಗಳಿವೆ. ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸ್ವಚ್ಛತೆ ಬಹಳ ಮುಖ್ಯ ಎಂದರು.

ಕಾಲೇಜಿನ ಕ್ರೀಡಾ ವಿಭಾಗದ ಮುಖ್ಯಸ್ಥ ಡಾ. ಪ್ರದೀಪ್ ಕುಮಾರ, ಕಾಲೇಜಿನ ಗ್ರಂಥಾಪಾಲಕ ಡಾ. ಮಲ್ಲಿಕಾರ್ಜುನ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಡ್ತಿ ಹೊಂದಿದ ಪ್ರಾಧ್ಯಾಪಕರಾದ ಡಾ. ಪ್ರದೀಪ್ ಕುಮಾರ್, ಡಾ. ಮಲ್ಲಿಕಾರ್ಜುನ ಅವರಿಗೆ ಮತ್ತು ಹೊಸದಾಗಿ ನೇಮಕಾತಿ ಹೊಂದಿದ ಬೊಮ್ಮನಾಳ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರಾದ ಡಾ. ನರಸಿಂಹ, ಡಾ. ಅಶೋಕ ಕುಮಾರ್, ಶುಭ, ಸುಮಿತ್ರಾ ಎಸ್.ವಿ., ವಿರೂಪಾಕ್ಷಪ್ಪ ಮುತ್ತಾಳ, ಶಿವಪ್ರಸಾದ್ ಹಾದಿಮನಿ, ಶ್ರೀಕಾಂತ್, ಬೊಮ್ಮನಾಳ ಹಾಗೂ ಕಾಲೇಜಿನ ಎಲ್ಲ ಅತಿಥಿ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಭೂಮಿಕಾ ಮತ್ತು ಸಬಿಹಾ ನಿರೂಪಿಸಿದರು. ಮಹಾದೇವಿ ಪ್ರಾರ್ಥಿಸಿದರು. ನೇತ್ರಾ ಸ್ವಾಗತಿಸಿದರು. ಭವ್ಯ ವಂದಿಸಿದರು.

ಕಾಲೇಜಿನ ಸಾಂಸ್ಕೃತಿಕ ವಿಭಾಗದ ಸಂಚಾಲಕಿ ಡಾ. ಹುಲಿಗೆಮ್ಮ ಮಾತನಾಡುತ್ತ, ಈ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮ ಕಾಲೇಜಿನ ಎಲ್ಲ ಘಟಕಗಳು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ, ಶಿಸ್ತು-ಸಂಯಮ, ಧೈರ್ಯ ಮತ್ತು ಜ್ಞಾನ ನೀಡುತ್ತಿವೆ ಎಂದು ಹೇಳಿದರು.

 


Spread the love

LEAVE A REPLY

Please enter your comment!
Please enter your name here