ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಡಿಸೆಂಬರ್ 15ರಂದು ಬೆಳಿಗ್ಗೆ 11.30 ಗಂಟೆಗೆ ರೋಣದ ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ಉಪ ಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಹಿಂದುಳಿದ ವರ್ಗಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ ಬಿ.ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ವಹಿಸುವರು.
ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಶಾಸಕರಾದ ಸಲೀಂ ಅಹ್ಮದ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರು ಹಾಗೂ ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ, ಬಾಗಲಕೋಟಿ ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ್ ಶೆಟ್ಟರ್, ನರಗುಂದ ಶಾಸಕ ಸಿ.ಸಿ. ಪಾಟೀಲ, ಅಥಣಿ ಶಾಸಕ ಲಕ್ಷö್ಮಣ ಸವದಿ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ರೋಣ ಪುರಸಭೆ ಅಧ್ಯಕ್ಷೆ ಗೀತಾ ಎಂ.ಮಾಡಲಗೇರಿ ಆಗಮಿಸುವರು.
ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಸಂಜಯ್ ಬಿ.ಶೆಟ್ಟೆಣ್ಣವರ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಅವರು ಸರ್ವರಿಗೂ ಸ್ವಾಗತ ಕೋರಿದ್ದಾರೆ.