ದೊಡ್ಡಬಳ್ಳಾಪುರ: ಜೆಡಿಎಸ್ ನ ಹಿರಿಯ ಮುಖಂಡ ಹೆಚ್ ಅಪ್ಪಯ್ಯಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿವಾಸಿಯಾಗಿರುವ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ರಾತ್ರಿ ಊಟ ಮಾಡಿ ಕೋಣೆಯಲ್ಲಿ ಮಲಗಿರುವ ವೇಳೆ ಘಟನೆ ನಡೆದಿದೆ.
Advertisement
ಇಬ್ಬರು ಹೆಣ್ಣು, ಓರ್ವ ಗಂಡು ಮಗನನ್ನು ಅಗಲಿದ್ದಾರೆ. ಅಪ್ಯಯ್ಯಣ್ಣ ಅವರು ಹಾಡೋನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ, ಬೆಂಗಳೂರು ಹಾಲು ಉತ್ಪಾಕರ ಸಹಕಾರ ಸಂಘದ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ, ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.