ಮೈಸೂರು: ಜಯಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಾ ಇದ್ದಾರೆ ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆಎಸ್ ಶಿವರಾಮು ಆರೋಪಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಜಯಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಾ ಇದ್ದಾರೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಸುಪಾರಿ ಪಡೆದುಕೊಂಡಿದ್ದಾರೆ ಎಂದು ಶಿವರಾಮು ಆರೋಪಿಸಿದ್ದಾರೆ.
Advertisement
ಕಾವಿ ಬಟ್ಟೆಗೆ ನಾವು ಗೌರವ ಕೊಡುತ್ತಾ ಇದ್ದೇವೆ. ಅದನ್ನು ಉಳಿಸಿಕೊಳ್ಳಿ. ಮೀಸಲಾತಿ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಇದೆ. ಸ್ವಾಮೀಜಿಯಾಗಿ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡುತ್ತಾ ಇದ್ದೀರಿ. ಇದೇನಾ ನಿಮ್ಮ ರೀತಿ ನೀತಿ? ಹಿಂದುಳಿದ ವರ್ಗಗಳು ವೀರಶೈವರು, ಲಿಂಗಾಯತರು ಒಂದಾಗಿ ಇದ್ದೇವೆ. ನಮ್ಮಗಳ ಮಧ್ಯೆ ಜಗಳ ತಂದು ಹಾಕುತ್ತಾ ಇದ್ದೀರಿ ಎಂದು ಶಿವರಾಮು ಕಿಡಿಕಾರಿದ್ದಾರೆ.