ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಗದಗ ಜಿಲ್ಲಾ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ ಜರುಗಿತು.
ಮುಖ್ಯ ಅತಿಥಿಗಳಾಗಿ ಜನಸಂಘದ ಹಿರಿಯ ಕಾರ್ಯಕರ್ತ ಬಿ.ಬಿ. ಓಂಕಾರ ಭಾಗವಹಿಸಿ ಮಾತನಾಡಿ, ಜನಸಂಘದ ಕಾಲದಿಂದ ಇಲ್ಲಿಯವರೆಗೆ ಪಕ್ಷ ಕಟ್ಟಿದ ಹಾಗೂ ಬೆಳೆದುಬಂದ ದಾರಿಯನ್ನು ವಲೋಕಿಸಿ, ಇಂದಿನ ಕಾರ್ಯಕರ್ತರು ಅದೃಷ್ಟವಂತರು. ಮುಂದಿನ ದಿನಮಾನಗಳಲ್ಲಿ ಪಕ್ಷ ವಹಿಸಿದ ಎಲ್ಲ ಕೆಲಸ ಕಾರ್ಯಗಳನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸಬೇಕು. ದೃಢ ಸಂಕಲ್ಪದಿAದ ಆತ್ಮಸ್ಥೆöÊರ್ಯದಿಂದ ಮುನ್ನುಗ್ಗಿ. ದೇಶದ ಬೆಳವಣಿಗೆಗೆ ಸಂಘದ ಎಲ್ಲ ಯೋಜನೆಗಳು ಕಾರ್ಯ ರೂಪಕ್ಕೆ ಬರುತ್ತಿದ್ದು, ಮುಂದಿನ ದಿನ ವಿಕಸಿತ ಭಾರತವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.
ಇನ್ನೋರ್ವ ಮುಖ್ಯ ಅತಿಥಿ ಕೃಷ್ಣಾ ಹೊಂಬಾಳೆ ಮಾತನಾಡಿ, ಪಕ್ಷ ಕೊಟ್ಟ ಎಲ್ಲ ಕೆಲಸ ಕಾರ್ಯಗಳನ್ನು ಶ್ರದ್ಧೆಯಿಂದ ನಿರ್ವಹಿಸಿರಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ಯುವ ಮೋರ್ಚಾ ಗದಗ ಜಿಲ್ಲಾಧ್ಯಕ್ಷ ಸಂತೋಷ ಅಕ್ಕಿ, ಉಪಾಧ್ಯಕ್ಷ ಭದ್ರೇಶ ಕುಸ್ಲಾಪೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಕ್ತಿ ಕತ್ತಿ, ಯುವ ಮೋರ್ಚಾದ ಎಲ್ಲ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.