ಮಂಗಳೂರು:- ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದಿದ್ದ 72 ವರ್ಷದ ಮಹಿಳೆ ನೀರು ಪಾಲಾಗಿರುವ ಘಟನೆ ಮಂಗಳೂರಿನ ಸೋಮೇಶ್ವರ ಕಡಲ ತೀರದಲ್ಲಿ ಜರುಗಿದೆ.
Advertisement
ಮೃತ ಮಹಿಳೆಯನ್ನು ಉಷಾ ಎಂದು ಗುರುತಿಸಲಾಗಿದೆ. ತಂಗಿಯ ಗಂಡನ ಪಿಂಡ ಪ್ರದಾನ ವಿಧಿಯಲ್ಲಿ ಪಾಲ್ಗೊಂಡು ಸಮುದ್ರಕ್ಕೆ ಸ್ನಾನಕ್ಕಿಳಿದಿದ್ದರು.
ಇತ್ತೀಚೆಗೆ ತಂಗಿ ನಿಶಾ ಭಂಡಾರಿ ಅವರ ಪತಿ ಕರುಣಾಕರ ಭಂಡಾರಿ ನಿಧನರಾಗಿದ್ದರು. ಮೃತ ಕರುಣಾಕರ ಭಂಡಾರಿಯ ಪಿಂಡ ಪ್ರದಾನ ವಿಧಿಯಲ್ಲಿ ಉಷಾ ಭಾಗವಹಿಸಿದ್ದರು. ಪುರೋಹಿತರು ಸಮುದ್ರ ತೀರದಲ್ಲಿ ಪಿಂಡ ಪ್ರದಾನ ನೆರವೇರಿಸಿದ ಬಳಿಕ ಮಹಿಳೆ ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.