ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು 15 ಬೆಂಚ್‌ಗಳನ್ನು ರಚಿಸಿ ರಾಜೀ ಸಂಧಾನಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಅದರಲ್ಲಿ 3042 ನ್ಯಾಯಾಲಯದಲ್ಲಿರುವ ಚಾಲ್ತಿ ಪ್ರಕರಣಗಳನ್ನು ಹಾಗೂ 31562 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದ್ದು, ಒಟ್ಟು 34604 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ತಿಳಿಸಿದ್ದಾರೆ.
ಇತ್ಯರ್ಥಗೊಂಡ ಪ್ರಕರಣಗಳಲ್ಲಿ 24 ಮೋಟಾರು ವಾಹನ ಅಪಘಾತ ಪ್ರಕರಣಗಳು, 124 ಚೆಕ್‌ಬೌನ್ಸ್ ಪ್ರಕರಣಗಳು, 33 ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು, 130 ಪಾಲುವಾಟ್ನಿ ಪ್ರಕರಣಗಳು, 65 ಬ್ಯಾಂಕ್ ಹಾಗೂ ಹಣ ವಸೂಲಾತಿ ಪ್ರಕರಣಗಳು, 60ವೈವಾಹಿಕ ಪ್ರಕರಣಗಳು, 59ವಿದ್ಯುತ್ ಕಾಯ್ದೆ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳು ಸೇರಿದಂತೆ ಒಟ್ಟು 3042 ಚಾಲ್ತಿ ಪ್ರಕರಣಗಳನ್ನು ಒಟ್ಟು ರೂ. 12,65,14,437ಗಳಿಗೆ ಪರಿಹಾರ ಒದಗಿಸುವುದರ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.
ಗದಗದಲ್ಲಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರ ಎಸ್.ಶೆಟ್ಟಿ, ಪ್ರಧಾನ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಖಾಶಿಮ ಚೂರಿಖಾನ್, 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಖಾದರಸಾಬ ಎಚ್ ಬೆನಕಟ್ಟಿ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ವ ಸಿಜೆಎಂ ಜಿ.ಆರ್. ಶೆಟ್ಟರ, ಅಪರ ಹಿರಿಯ ದಿವಾಣಿ ನ್ಯಾಯಾಧೀಶರಾದ ಪದ್ಮಶ್ರೀ ಆರ್.ಪಾಟೀಲ, ಜೆಎಂಎಫ್‌ಸಿ ೧ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ದೀಪ್ತಿ ನಾಡಗೌಡ್ರ, ಜೆಎಂಎಫ್‌ಸಿ ೨ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ಬೀರಪ್ಪ ಕಾಂಬಳೆ ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎಂ.ಐ.ಹಿರೇಮನಿ ಪಾಟೀಲ, ಉಪಾಧ್ಯಕ್ಷರಾದ ಎ.ಎಂ. ಹದ್ಲಿ, ಪ್ರಧಾನ ಕಾರ್ಯದರ್ಶಿ ಬಿ.ಎಚ್. ಮಾಡಲಗೇರಿ, ಜಂಟಿ ಕಾರ್ಯದರ್ಶಿ ಪಿ.ಬಿ. ಕಣಗಿನಹಾಳ, ಖಜಾಂಚಿ ವಿ.ಎಚ್. ಮೇರವಾಡೆ, ಸರ್ಕಾರಿ ಅಭಿಯೋಜಕರಾದ ಸವಿತಾ ಎಂ.ಶಿಗ್ಲಿ, ಜಿಲ್ಲಾ ಸರ್ಕಾರಿ ವಕೀಲರಾದ ಎಂ.ಎA. ಕುಕನೂರ, ಅಪರ ಜಿಲ್ಲಾ ಸರ್ಕಾರಿ ವಕೀಲರಾದ ಜಿ.ಬಿ. ನೀಲರಡ್ಡಿ, ಹಾಗೂ ವಕೀಲ ವೃಂದದವರು, ಸಂಧಾನಕಾರ ವಕೀಲರು, ಪಕ್ಷಗಾರರು ಹಾಗೂ ಎಲ್ಲಾ ನ್ಯಾಯಾಲಯಗಳ ಸಿಬ್ಬಂದಿ ವರ್ಗ ಉಪಸ್ಥಿತರಿದ್ದು ಲೋಕ ಅದಾಲತ್ ಯಶಸ್ವಿಗೊಳಿಸಿದರು.
ಅಂತೆಯೇ ಎಲ್ಲಾ ತಾಲೂಕಗಳ ನ್ಯಾಯಾಧೀಶರು ಹಾಗೂ ವಕೀಲ ವೃಂದದವರು, ಸಿಬ್ಬಂದಿ ವರ್ಗ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಗಣಿ ಮತ್ತು ¨ಭೂ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಕೂಡಾಆಯಾತಾಲೂಕಾ ನ್ಯಾಯಾಲಯಗಳಲ್ಲಿ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ರಾಜೀ ಸಂಧಾನ ಯಶಸ್ವಿಗೊಳಿಸಿದರು.
ರಾಷ್ಟಿçÃಯ ಲೋಕ ಅದಾಲತ್‌ಗೆ ಸಹಕಾರ ನೀಡಿದ ಗದಗ ಜಿಲ್ಲೆಯ ಎಲ್ಲಾ ವಕೀಲರ ಸಂಘದ ಸರ್ವ ಸದಸ್ಯರಿಗೆ ಹಾಗೂ ಪಕ್ಷಗಾರರಿಗೆ, ಜಿಲ್ಲೆಯ ಎಲ್ಲಾ ನ್ಯಾಯಾಧೀಶರಿಗೆ, ಸಿಬ್ಬಂದಿ ವರ್ಗದವರಿಗೆ, ಜಿಲ್ಲಾ ನ್ಯಾಯಾಲಯದ ತಾಂತ್ರಿಕ ಸಿಬ್ಬಂದಿ ವರ್ಗದವರಿಗೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ, ಎಲ್ಲಾ ಮಾಧ್ಯಮದವರಿಗೆ, ಲೋಕ ಅದಾಲತ್‌ಗೆ ಸಹಕಾರ ನೀಡಿದ ಎಲ್ಲರಿಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ದsನ್ಯವಾದಗಳನ್ನು ಅರ್ಪಿಸಿದ್ದಾರೆ.
ವ್ಯಾಜ್ಯಪೂರ್ವ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವಿದ ಬ್ಯಾಂಕ್ ಪ್ರಕರಣಗಳು, ಕಂದಾಯ ಅದಾಲತ್ ಪ್ರಕರಣಗಳು ಸೇರಿದಂತೆ ಒಟ್ಟು 31562ವ್ಯಾಜ್ಯ ಪೂರ್ವ ಪ್ರಕರಣಗಳು ರೂ. 3,03,02,015ಗಳಿಗೆ ರಾಜೀ ಸಂಧಾನವಾಗಿದೆ. ಗದಗ ಜಿಲ್ಲೆಯಲ್ಲಿ ವಿವಿಧ ಕೌಟುಂಬಿಕ ಪ್ರಕರಣಗಳಲ್ಲಿ ಒಟ್ಟು 17 ಜೋಡಿಗಳು ಪುನಃ ಒಂದುಗೂಡಿ ಹೋಗಿದ್ದಾರೆ.