ಅಡಿಕೆ ಕ್ಯಾನ್ಸರ್​ ಕಾರಕವಲ್ಲ: ಪ್ರತಿಷ್ಠಿತ ವಿವಿ ಅಧ್ಯಯನ ಹೇಳಿದಿಷ್ಟು, ಬೆಳೆಗಾರರು ಖುಷ್!

0
Spread the love

ಮಂಗಳೂರು:- ಅಡಿಕೆ ಕ್ಯಾನ್ಸರ್​ ಕಾರಕವಲ್ಲ. ಬದಲಿಗೆ ಕ್ಯಾನ್ಸರ್​ ಪ್ರತಿಬಂಧಕ ಎಂದು ನಿಟ್ಟೆ ವಿವಿ‌ಯ ವಿಜ್ಞಾನಿ ಪ್ರ. ಇಡ್ಯಾ ಕರುಣಾಸಾಗರ್‌ ಮತ್ತವರ ತಂಡ ನಡೆಸಿದ ಮಹತ್ವದ ಸಂಶೋಧನೆಯಲ್ಲಿ ತಿಳಿದು ಬಂದಿದೆ.

Advertisement

ಅಡಿಕೆ ರಸ ಕ್ಯಾನ್ಸರ್‌ ಕಣಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತದೆ ಎಂಬುದನ್ನು ಪತ್ತೆ ಮಾಡಿರುವುದಾಗಿ ನಿಟ್ಟೆ ವಿವಿ‌ಯ ವಿಜ್ಞಾನಿಗಳ ತಂಡ ಪ್ರತಿಪಾದಿಸಿದೆ. ಅಡಿಕೆಯ ಬಳಕೆಯಿಂದ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ ಎಂದಿದೆ.

ನಿಟ್ಟೆ ವಿವಿ‌ಯ ವಿಜ್ಞಾನಿಗಳ ತಂಡದ ಸಂಶೋಧನೆಯನ್ನು ಪರಿಗಣಿಸಿ ಅಡಿಕೆಯ ಬಗ್ಗೆ ಸಮಗ್ರ ಅಧ್ಯಯನವಾಗಬೇಕು ಎಂದು ಕ್ಯಾಂಪ್ಕೋ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಇನ್ನೂ ಅಡಿಕೆ ಕ್ಯಾನ್ಸರ್​​ ಕಾರಕ ಎಂಬ ಇಂಟರ್​ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ ಮಾಹಿತಿ ಆಧಾರಿತ ವಿಶ್ವ ಅರೋಗ್ಯ ಸಂಸ್ಥೆಯ ವರದಿ, ಮುಖ್ಯವಾಗಿ ಕರ್ನಾಟಕ ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ತೀವ್ರ ಆತಂಕ ಸೃಷ್ಟಿಸಿತ್ತು.


Spread the love

LEAVE A REPLY

Please enter your comment!
Please enter your name here