ಬೆಳಗಾವಿ: ಅಧಿವೇಶನಕ್ಕೆ ಯಾರೇ ಅಡ್ಡಿಪಡಿಸಿದ್ರೂ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸುವರ್ಣಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಭೇಟಿಯಾಗಿ ವಕ್ಫ್ ವಿರುದ್ದ ಬಿಜೆಪಿ ಹೋರಾಟದ ವಿಚಾರವಾಗಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಅವಕಾಶವಿದೆ.
ಆದರೆ ದುರುದ್ದೇಶದಿಂದ ಹೋರಾಟ ಮಾಡಬಾರದು. ನಮ್ಮ ತಪ್ಪುಗಳಿದ್ರೆ ವಿಪಕ್ಷದವರು ಚರ್ಚಿಸಲಿ. ಅಭಿವೃದ್ದಿ ವಿಚಾರಗಳ ಬಗ್ಗೆ ಚರ್ಚೆ ಮಾಡಲಿ. ಎಐಸಿಸಿ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತೆ. ಅಡ್ಡಿಪಡಿಸೋಕೆ ಬಂದ್ರೆ ಕಾನೂನು ಕ್ರಮ ಕೈಗೊಳ್ತೀವಿ. ಯಾರೇ ಅಡ್ಡಿಪಡಿಸಿದ್ರೂ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನೂ ವಕ್ಫ್ ಪ್ರಕರಣವನ್ನು ಸಿಬಿಐಗೆ ವಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿರುವ ವಿಚಾರವಾಗಿ ಪ್ರತಿಕ್ರಿಯಿಸಿ, “ಬಿಜೆಪಿ ಕಾಲದಲ್ಲಿ ಒಂದೇ ಒಂದು ಪ್ರಕರಣ ಸಿಬಿಐಗೆ ಕೊಟ್ಟರಾ?. ಯಾವ ನೈತಿಕತೆ ಇದೆ ನಮ್ಮನ್ನು ಪ್ರಶ್ನಿಸಲು?. ಬಿಜೆಪಿಯವರು ಅಪಪ್ರಚಾರ ಮಾಡ್ತಾರೆ” ಎಂದು ತಿರುಗೇಟು ಕೊಟ್ಟಿದ್ದಾರೆ.