ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಯನ್ನು ತ್ವರಿತಗತಿಯಲ್ಲಿ ಪರಿಹರಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಬೇಕು ಎಂದು ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಬೀದಿ ಬದಿ ವ್ಯಾಪಾರಿಗಳ ಸಂಘಜ ತಾಲೂಕು ಸಮಿತಿ ನೇತೃತ್ವದಲ್ಲಿ ತಹಸೀಲ್ದಾರ, ಪಿಎಸ್ಐ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷ ಶಾಮೀದಸಾಬ ದಿಂಡವಾಡ ಮಾತನಾಡಿ, ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಗಳಿಗೆ, ಕುಂದು ಕೊರತೆಗಳ ಪರಿಹಾರಕ್ಕಾಗಿ ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಬೀದಿ ಬದಿ ವ್ಯಾಪಾರಿಗಳಿಗೆ ನ್ಯಾಯ ಒದಗಿಸಬೇಕು ಎಂದರು.
ಪ್ರಧಾನ ಕಾರ್ಯದರ್ಶಿ ಪೀರು ರಾಠೋಡ ಮಾತನಾಡಿ, ಗಜೇಂದ್ರಗಡ ನಗರವು ಎಲ್ಲಾ ರೀತಿಯ ವ್ಯಾಪಾರಿಗಳ ಅನುಕೂಲ ಇರುವ ನಗರವಾಗಿದೆ. ಸುತ್ತ ಮುತ್ತಲಿನ ಜನರಿಗೆ, ವ್ಯಾಪಾರಸ್ಥರ ಜೀವಾಳವಾಗಿದೆ. ಮಾರುಕಟ್ಟೆ ಸ್ಥಳಾಂತರದಿಂದಾಗಿ ಎಷ್ಟೋ ಬಡ ಕುಟುಂಬಗಳು ಇದೀಗ ಬೀದಿಗೆ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸರಿಪಡಿಸಲು ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಕಾರ್ಮಿಕರ ಮುಖಂಡರಾದ ಬಾಲು ರಾಠೋಡ, ಎಂ.ಎಸ್. ಹಡಪದ, ಚೌಡಮ್ಮ ಯಲ್ಪು, ಮೈಬೂಸಾಬ್ ಮಾಲ್ದಾರ, ಮುತ್ತಣ್ಣ ರಾಠೋಡ, ಅಂಬರೇಶ ಚವ್ಹಾಣ, ಮಾರುತಿ ಗೊಂದಳೆ, ಮುತ್ತಣ್ಣ ತೇಜಪ್ಪ ರಾಠೋಡ, ವಿಷ್ಣು ಚಂದುಕರ, ಮಹಾಂತೇಶ ಹೀರೇಮಠ, ಬಡಿಗೇರ ಪರಶುರಾಮ, ಗಂಗಾಧರ ಸತ್ಯನ್ಯವರ, ಯಮನೂರಸಾಬ ಗಾದಿ, ಮರ್ತುಜಾ ದಿಂಡವಾಡ, ಅಶೋಕ್ ಚವ್ಹಾಣ, ಕಳಕಪ್ಪ ಮಾಳೋತ್ತರ, ರಾಜುಪಾಲ, ಅಲ್ಲಾಬಕ್ಷಿ ಮುಚ್ಚಾಲಿ, ಸುರೇಶ್ ಅಕ್ಕಸಾಲಿ, ನಾಗರಾಜ ಆಜೀರ, ದೇವಕ್ಕೆ ರಾಠೋಡ, ಭದ್ರೇಶ್ ರಾಠೋಡ, ದಾನಪ್ಪ ರಾಠೋಡ, ಮಂಜುನಾಥ ಚವ್ಹಾಣ, ನಾಗಪ್ಪ ಅಜ್ಮೀರ್ ಮುಂತಾದವರಿದ್ದರು.