HomeKarnataka Newsರಾಜ್ಯ ಸರ್ಕಾರದಿಂದ ಸಿದ್ದಗಂಗಾ ಮಠಕ್ಕೆ ಶಾಕ್: ನೀರಾವರಿ ವಿದ್ಯುತ್​ ಬಿಲ್ ಪಾವತಿಸುವಂತೆ ಪತ್ರ

ರಾಜ್ಯ ಸರ್ಕಾರದಿಂದ ಸಿದ್ದಗಂಗಾ ಮಠಕ್ಕೆ ಶಾಕ್: ನೀರಾವರಿ ವಿದ್ಯುತ್​ ಬಿಲ್ ಪಾವತಿಸುವಂತೆ ಪತ್ರ

For Dai;y Updates Join Our whatsapp Group

ತುಮಕೂರು: ನಾಡಿನ ಪ್ರಮುಖ ಲಿಂಗಾಯತ ಮಠಗಳಲ್ಲಿ ಒಂದಾದ, ದೇಶಕ್ಕೆ ತ್ರಿವಿಧ ದಾಸೋಹ ನೀಡುತ್ತಿರುವ ಪ್ರಸಿದ್ಧ ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಜ್ಯ ಸರ್ಕಾರ ಶಾಕ್‌ ನೀಡಿದೆ. ಸರ್ಕಾರಿ ನೀರಾವರಿ ಯೋಜನೆಗೆ ಕೆಐಎಡಿಬಿ ಬಳಸಿದ ಬರೊಬ್ಬರಿ 70,31,438 ರೂ. ವಿದ್ಯುತ್ ಬಿಲ್‌ನ್ನು ಸಿದ್ದಗಂಗಾ ಮಠ ಭರಿಸುವಂತೆ ಕೆಐಎಡಿಬಿ ಪತ್ರ ಬರೆದಿದೆ.

ಮಂಡಳಿಯ ಆರ್ಥಿಕ ಪರಿಸ್ಥಿತಿಯು ಸುಸ್ಥಿತಿಯಲ್ಲಿ ಇಲ್ಲದಿರುವುದರಿಂದ ಈ ವಿದ್ಯುತ್ ಬಿಲ್ ಅನ್ನು ಭರಿಸುವಂತೆ ಕೋರಲಾಗಿದೆ ಎಂದು ಪತ್ರದಲ್ಲಿ ಒಕ್ಕಣೆ ಬರೆಯಲಾಗಿದೆ. ಸಿದ್ದಗಂಗಾ ಮಠದ ಸನಿಹದಲ್ಲೇ ಇರುವ ದೇವರಾಯಪಟ್ಟಣ ಕೆರೆಗೆ ಕೆಐಎಡಿಬಿ ಪೈಪ್‌ಲೈನ್ ಮೂಲಕ ಹೊನ್ನೆನಹಳ್ಳಿಯಿಂದ ಪ್ರಾಯೋಗಿಕವಾಗಿ ನೀರು ಹರಿಸಿದೆ. ಈ ಯೋಜನೆ ಪರಿಪೂರ್ಣವಾಗಿ ಜಾರಿಯಾದರೆ ಸಿದ್ದಗಂಗಾ ಮಠ ಸೇರಿದಂತೆ ದೇವರಾಯಪಟ್ಟಣ,

ಮಾದನಾಯಕನ ಪಾಳ್ಯ, ಕುಂದೂರು ಗ್ರಾಮಕ್ಕೆ ನೀರು ಪೂರೈಕೆ ಆಗಲಿದೆ. ಇಲ್ಲಿವರೆಗೆ ಪ್ರಾಯೋಗಿಕವಾಗಿ ಅಷ್ಟೇ ನೀರು ಹರಿಸಲಾಗಿದೆ. ಗ್ರಾಮಗಳಿಗೆ ವಿತರಣೆ ಆಗುತ್ತಿಲ್ಲ. ಇದಕ್ಕೆ ವೆಚ್ಚವಾದ ವಿದ್ಯುತ್ ಬಿಲ್‌ನ್ನು ಸಿದ್ದಗಂಗಾ ಮಠ ಪಾವತಿಸಬೇಕು ಎಂದು ಕೆಐಎಡಿಬಿ ಬರೆದಿರುವ ಪತ್ರ ಈಗ ವಿವಾದಕ್ಕೆ ಕಾರಣವಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img