ಬೆಳಗಾವಿ:-ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಆರೋಪದಡಿ ಬಿಜೆಪಿ MLC ಸಿಟಿ ರವಿ ಅವರನ್ನು ಅರೆಸ್ಟ್ ಮಾಡಲಾಗಿದೆ.
Advertisement
ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿದ್ದಾರೆ.
ಬಲವಂತಾಗಿಯೇ ಪೊಲೀಸರು ಸುವರ್ಣಸೌಧದಿಂದ ಸಿಟಿ ರವಿ ಅವರನ್ನು ಎತ್ತಿಕೊಂಡು ಬಂದು ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ಇಬ್ಬರು ಎಸ್‌ಪಿ ರ್ಯಾಂಕ್ನ ಅಧಿಕಾರಿಗಳು, ನಾಲ್ಕು ಎಸ್ಕಾರ್ಟ್, ಎರಡು ಕೆಎಸ್‌ಆರ್‌ಪಿ ತುಕಡಿ ಭದ್ರತೆಯಲ್ಲಿ ಸಿಟಿ ರವಿ ಕರೆದುಕೊಂಡು ಹೋಗಲಾಗಿದೆ.