ಇಂಜಿನಿಯರಿಂಗ್ ಕ್ಷೇತ್ರದ ಬಗ್ಗೆ ವಿಶೇಷ ಕಾರ್ಯಾಗಾರ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ:  ಪ್ರಸಿದ್ಧ ಅಬ್ಬಾಟ್ (ಂbboಣ) ಕಂಪನಿಯಲ್ಲಿ ಕಳೆದ ೧೨ ವರ್ಷಗಳಿಂದ ಸೀನಿಯರ್ ಸಾಫ್ಟವೇರ್ ಇಂಜಿನಿಯರ್ ಟೀಮ್ ಲೀಡರ್ ಆಗಿ ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿರುವ ಪ್ರತಿಭಾವಂತ ತಾಂತ್ರಿಕ ಶಿಲ್ಪಿ ಶೃತಿ ಹಬೀಬ್ ಇತ್ತೀಚೆಗೆ ಗದುಗಿನ ಸನ್ಮಾರ್ಗ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಬೇಟಿ ನೀಡಿದರು.

Advertisement

ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಾ, ಇಂದು ಇಂಜಿನಿಯರಿಂಗ್ ಪದವೀಧರರಿಗೆ ಕೇವಲ ದೇಶದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಭಾರೀ ಬೇಡಿಕೆ ಇದೆ. ಇಂಜಿನಿಯರಿಂಗ್ ಕ್ಷೇತ್ರ ಇಂದು ಮೊದಲಿಗಿಂತಲೂ ವಿಸ್ತಾರವಾಗಿ ಬೆಳೆದು ನಿಂತಿದೆ. ಕಾಲೇಜಿನಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶ್ರೀ ವಿಶ್ವೇಶ್ವರಯ್ಯನವರಂತೆ, ಕಲ್ಪನಾ ಚಾವ್ಲಾ, ವಿಲಿಯಮ್ಸ್ ಅವರಂತೆನೀವೂ ಸಾಧಕರಾಗಿ ಎಂದು ಹಾರೈಸಿದರು.

ಮಹಾವಿದ್ಯಾಲಯದ ನಿರ್ದೇಶಕ ಪ್ರೊ. ಉಡುಪಿ ದೇಶಪಾಂಡೆ, ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ, ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಾಗಾರದಲ್ಲಿ ಸಂಸ್ಥೆಯ ಚೇರಮನ್ ಪ್ರೊ. ರಾಜೇಶ ಕುಲಕರ್ಣಿ, ಆಡಳಿತಾಧಿಕಾರಿ ಎಂ.ಸಿ. ಹಿರೇಮಠ, ನಿರ್ದೇಶಕರಾದ ಪ್ರೊ. ರೋಹಿತ, ಪ್ರೊ. ರಾಹುಲ ಒಡೆಯರ, ಪ್ರೊ. ಪುನೀತ ದೇಶಪಾಂಡೆ, ಪ್ರೊ. ಸೈಯ್ಯದ್ ಮತಿನ್ ಮುಲ್ಲಾ, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರೊ. ಸಂತೋಷ ನಾಗರಾಳ ಸ್ವಾಗತಿಸಿದರೆ, ಪ್ರೊ. ರಾಧಿಕಾ ಪಾಟೀಲ ವಂದಿಸಿದರು.


Spread the love

LEAVE A REPLY

Please enter your comment!
Please enter your name here