ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಹೇಗಿತ್ತು ಮೊದಲ ದಿನದ ಸಂಭ್ರಮ!?

0
Spread the love

ಮಂಡ್ಯ:- ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳು ನಡೆಯುವ 87 ನೇ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇಂದು ದೀಪ ಬೆಳಗಿಸುವ ಮೂಲಕ ಚಾಲನೆ ಕೊಟ್ಟಿದ್ದಾರೆ.

Advertisement

ಮೊದಲ ದಿನವಾದ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಉತ್ಸಾಹದಿಂದಲೇ ಸಮ್ಮೇಳನಕ್ಕೆ ಭಾಗಿಯಾದರು.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಪಸಪ್ಪ ಅವರ ಮೆರವಣಿಗೆಯಲ್ಲಿ ಕಲಾ ತಂಡಗಳು ಭಾಗಿಯಾದವು. ಮಂಡ್ಯದ ಮುಸ್ಲೀಂ ಬಾಂಧವರು ಮಂಡ್ಯದಲ್ಲಿ ಕನ್ನಡ ಬಾವುಟ ಹಿಡಿದು ಕನ್ನಡದ ಹಬ್ಬವನ್ನು ಸಂಭ್ರಮಿಸಿದರು.

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ವೇದಿಕೆಯಲ್ಲಿ ಹಾವೇರಿ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಅವರೊಂದಿಗೆ ಸಿಎಂ ಸಿದ್ದರಾಮಯ್ಯ, ಸಚಿವ ಚಲುವರಾಯಸ್ವಾಮಿ ಸಂತಸ ಹಂಚಿಕೊಂಡರು.

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ವಿಶೇಷ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲಾಯಿತು. ಇನ್ನೂ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಕಂಪಿನೊಂದಿಗೆ ನಾಲಿಗೆಗೂ ರುಚಿ ರುಚಿಯಾದ ಅದ್ಭುತ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

ಸಮ್ಮೇಳನಕ್ಕೆ ಆಗಮಿಸುವ ಗಣ್ಯವ್ಯಕ್ತಿಗಳು, ನೋಂದಾಯಿತ ಪ್ರತಿನಿಧಿಗಳು, ಸಾರ್ವಜನಿಕರು, ಸ್ವಯಂ ಸೇವಕರು, ಮಾಧ್ಯಮ ಪ್ರತಿನಿಧಿಗಳು, ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಅಂದಾಜು ಮೂರು ಲಕ್ಷಕ್ಕೂ ಅಧಿಕ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಇದಕ್ಕಾಗಿ ನಾಲ್ಕು ಪ್ರತ್ಯೇಕ ಸ್ಥಳಗಳಲ್ಲಿ ಅಂದಾಜು 300 ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿತ್ತು.

ಇನ್ನೂ ಸಕ್ಕರೆ ನಾಡು ಮಂಡ್ಯದಲ್ಲಿ ಮೂವತ್ತು ವರ್ಷಗಳ ನಂತರ ಮತ್ತೊಮ್ಮೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೂರು ದಿನಗಳ ಕಾಲ ನಡೆಯುತ್ತಿದೆ. ನುಡಿಜಾತ್ರೆಯನ್ನು ಸಾಕಷ್ಟು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here