ಕೇಂದ್ರ ಸಚಿವ ಅಮಿತ್ ಶಾ, ಎಂಎಲ್‌ಸಿ ಸಿ.ಟಿ. ರವಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರ ಹೇಳಿಕೆಗಳನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಗದುಗಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ರೋಣ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಬಿಜೆಪಿ ಎಂದಿಗೂ ಸಂವಿಧಾನ ವಿರೋಧಿ ಪಕ್ಷವಾಗಿದೆ. ಬಿಜೆಪಿ ಪಕ್ಷವನ್ನು ಪ್ರತಿನಿಧಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರರನ್ನು ಅವಮಾನಿಸಿದ್ದಾರೆ. ದೇಶಕ್ಕೆ ಪವಿತ್ರವಾದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಹೆಸರನ್ನು ಜಪ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ. ಕಾಂಗ್ರೆಸ್ ಅಂಬೇಡ್ಕರ್ ಹೆಸರನ್ನು ನಿರಂತರವಾಗಿ ಜಪಿಸಲಿದೆ. ಆದರೆ ಜನ ಎಚ್ಚೆತ್ತುಕೊಳ್ಳಬೇಕು. ಇಂಥಹ ಸಂವಿಧಾನ ವಿರೋಧಿ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದರು.

ಬುದ್ಧ, ಬಸವಣ್ಣನವರು ಸಾರಿದ ಸಮಾನತೆಯ ಸಂದೇಶವನ್ನೇ ಡಾ. ಅಂಬೇಡ್ಕರ್ ಪ್ರತಿಪಾದಿಸಿದ್ದಾರೆ. ಸಂವಿಧಾನದಲ್ಲಿಯೂ ಅದನ್ನೇ ಉಲ್ಲೇಖಿಸಿದ್ದಾರೆ. ಆದರೆ ಬಿಜೆಪಿ ನಾಯಕರಿಗೆ ಸಮಾನತೆಯ ಅಗತ್ಯವಿಲ್ಲ. ದೇಶದ ಜನ ಶಾಂತಿ, ಸೌಹಾರ್ದಯುತ ಬದುಕು ನಡೆಸುವುದು ಬೇಕಾಗಿಲ್ಲ. ಇಂಥಹ ಸಂವಿಧಾನ ವಿರೋಧಿ ಮನಸ್ಥಿತಿಯನ್ನು ಹೊಂದಿರುವ ಅಮಿತ್ ಶಾ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಇನ್ನು ರಾಜ್ಯದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಸಚಿವೆ ಲಕ್ಷಿö್ಮÃ ಹೆಬ್ಬಾಳ್ಕರ್ ವಿರುದ್ಧ ಮಾತನಾಡಿದ ಭಾಷೆ, ಬಳಸಿದ ಶಬ್ಧಗಳಿಂದ ರಾಜಕಾರಣಿಗಳೆಲ್ಲರೂ ತಲೆ ತಗ್ಗಿಸುವಂತಾಗಿದೆ. ಸಿ.ಟಿ. ರವಿ ಹೇಳಿಕೆ ಭವಿಷ್ಯದ ರಾಜಕಾರಣಿಗಳ ಮೇಲೆ ಯಾವ ರೀತಿ ಪ್ರಭಾವ ಬೀರುತ್ತದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಈ ಕೂಡಲೇ ಸಿ.ಟಿ. ರವಿ ಅವರ ಪರಿಷತ್ ಸದಸ್ಯತ್ವನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರಾದ ಬಿ.ಬಿ. ಅಸೂಟಿ, ಮಿಥುನ್ ಪಾಟೀಲ, ಅಶೋಕ ಮಂದಾಲಿ, ಟಿ. ಈಶ್ವರ, ಸುಜಾತಾ ದೊಡ್ಡಮನಿ, ವಿ.ಬಿ. ಸೋಮನಕಟ್ಟಿಮಠ, ಉಮರ ಫಾರೂಕ್ ಹುಬ್ಬಳ್ಳಿ ಮುಂತಾದವರು ಉಪಸ್ಥಿತರಿದ್ದರು.

ಬಿಜೆಪಿ ನಾಯಕರು ಗದಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಘೇರಾವ್ ಹಾಕುವ ಯತ್ನದಲ್ಲಿದ್ದಾರೆ. ಇವರೆಲ್ಲರೂ ಯಾವ ಕಾರಣಕ್ಕೆ ಘೇರಾವ್ ಹಾಕುತ್ತಿದ್ದಾರೆ? ಸಿ.ಟಿ. ರವಿ ಮತ್ತು ಅಮಿತ್ ಶಾ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡು ಬಂದಿದ್ದಾರೆ, ಕಾಂಗ್ರೆಸ್ ಇರುವವರೆಗೂ ಸಂವಿಧಾನಕ್ಕೆ ಅಪಚಾರವಾಗಲು ಬಿಡುವುದಿಲ್ಲ.

– ಜಿ.ಎಸ್. ಪಾಟೀಲ.

ಶಾಸಕರು, ಕಾಂಗ್ರೆಸ್ ಜಿಲ್ಲಾಧ್ಯಕ್ಷರು.


Spread the love

LEAVE A REPLY

Please enter your comment!
Please enter your name here