ಬೆಂಗಳೂರು:– ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಇನ್ನೂ ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಡಿ.24 ರಿಂದ 3 ದಿನ ಮಳೆಯಾಗಲಿದೆ.
ವಿಜಯಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.